ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ಸನ್ನು ‘ಮುಸ್ಲಿಂ ಲೀಗ್ ಕಾಂಗ್ರೆಸ್’ ಎಂದು ಕರೆಯಬೇಕು: ಬಿಜೆಪಿ

ಸಿಎಎ ವಿರುದ್ಧ ಪ್ರತಿಭಟಿಸುವ ಮೂಲಕ ಹಿಂದೂಗಳನ್ನು ಕಾಂಗ್ರೆಸ್ ನಿಂದಿಸುತ್ತಿದೆ: ಸಂಬಿತ್ ಪಾತ್ರಾ
Last Updated 22 ಜನವರಿ 2020, 12:17 IST
ಅಕ್ಷರ ಗಾತ್ರ

ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಹಿಂದೂಗಳನ್ನು ಕಾಂಗ್ರೆಸ್ ನಿಂದಿಸುತ್ತಿದೆ. ಆ ಪಕ್ಷವನ್ನು ‘ಮುಸ್ಲಿಂ ಲೀಗ್ ಕಾಂಗ್ರೆಸ್’ ಹೆಸರಿನಿಂದ ಕರೆಯಬೇಕು ಎಂದು ಬಿಜೆಪಿ ಟೀಕಿಸಿದೆ.

ಹಿಂದೂಗಳನ್ನು ನಿಂದಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕ್ಷಮೆ ಕೋರಬೇಕು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಗ್ರಹಿಸಿದ್ದಾರೆ.

‘ಕಾಂಗ್ರೆಸ್‌ನವರು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಅವರನ್ನು ಧ್ರುವೀಕರಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಪಾತ್ರಾ ಟ್ವೀಟ್ ಮಾಡಿದ್ದಾರೆ.

ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂಬ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಟಲಿ ಮೂಲದ ಸೋನಿಯಾ ಗಾಂಧಿ ಪೋಷಕರುಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರೇ ಎಂದು ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಜತೆ ಕೈಜೋಡಿಸಿದ್ದನ್ನು ಕಾಂಗ್ರೆಸ್ ಸಮರ್ಥಿಸಿದ ಬಗ್ಗೆಯೂ ಅವರು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT