ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತಿನಲ್ಲಿ ಮತ್ತಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ: ಬಿಜೆಪಿ

Last Updated 16 ಮಾರ್ಚ್ 2020, 7:34 IST
ಅಕ್ಷರ ಗಾತ್ರ

ಗುಜರಾತ್: ಕಾಂಗ್ರೆಸ್ ಪಕ್ಷದ ನಾಲ್ಕು ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಗುಜರಾತ್ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ನಿತಿನ್ ಪಟೇಲ್ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳವನ್ನು ಎತ್ತಿತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.ಶಾಸಕರ ರಾಜೀನಾಮೆಯನ್ನು ಸ್ವೀಕರ್ ಅಂಗೀಕರಿಸಿದ್ದಾರೆ. ಶೀಘ್ರದಲ್ಲಿಯೇ ಇನ್ನೂ ಒಂದಿಬ್ಬರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದರು.

ಗುಜರಾತ್ ವಿಧಾನಸಭೆ ಪ್ರಸ್ತುತ 182 ಮಂದಿ ಶಾಸಕರ ಬಲಾಬಲ ಹೊಂದಿದೆ. ಇದರಲ್ಲಿ ಬಿಜೆಪಿ 106, ಬಿಟಿಪಿ 2, ಎನ್ ಸಿಪಿ 1 ಸೇರಿ ಆಡಳಿತ ನಡೆಸುತ್ತಿವೆ. ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ 69 ,ಐಎನ್‌‌ಡಿ 1 ಶಾಸಕರನ್ನು ಹೊಂದಿದ್ದರೆ, ಇತರೆ 6 ಸ್ಥಾನಗಳಿವೆ.
ಗುಜರಾತ್‌‌ನಲ್ಲಿ ಶಾಸಕರು ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್‌‌ನ ಸಂಖ್ಯಾಬಲ 65ಕ್ಕೆ ಕುಸಿದಿದೆ.
ಈಗ ಈ ಶಾಸಕರು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆದ್ದರೆ ಯಾವ ಪಕ್ಷ ಸೇರುತ್ತಾರೋ ಆ ಪಕ್ಷದ ಶಾಸಕರ ಸಂಖ್ಯೆಯಲ್ಲಿ ಹೆಚ್ಚಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT