ಬಿಜೆಪಿ ಉಪಾಧ್ಯಕ್ಷರಾಗಿ ರಮಣ್‌ ಸಿಂಗ್, ಶಿವರಾಜ್‌ ಸಿಂಗ್, ವಸುಂಧರಾ ರಾಜೇ ನೇಮಕ

7

ಬಿಜೆಪಿ ಉಪಾಧ್ಯಕ್ಷರಾಗಿ ರಮಣ್‌ ಸಿಂಗ್, ಶಿವರಾಜ್‌ ಸಿಂಗ್, ವಸುಂಧರಾ ರಾಜೇ ನೇಮಕ

Published:
Updated:

ನವದೆಹಲಿ: ಮಾಜಿ ಮುಖ್ಯಮಂತ್ರಿಗಳಾದ ರಮಣ್‌ ಸಿಂಗ್, ಶಿವರಾಜ್‌ ಸಿಂಗ್ ಚೌಹಾಣ್‌ ಮತ್ತು ವಸುಂಧರಾ ರಾಜೇ ಅವರನ್ನು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ. ಪ್ರಸ್ತುತ  ಈ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. 

ಬಿಜೆಪಿಯ ಭದ್ರಕೋಟೆಯಾಗಿದ್ದ ಈ ರಾಜ್ಯಗಳಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಈ ಮೂವರು ಮಾಜಿ ಮುಖ್ಯಮಂತ್ರಿಗಳು ವಿಫಲರಾಗಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಕೆಲಸ ಮಾಡುವ ಸಲುವಾಗಿ ಇವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 1

  Sad
 • 0

  Frustrated
 • 3

  Angry

Comments:

0 comments

Write the first review for this !