ಮಂಗಳವಾರ, ಫೆಬ್ರವರಿ 18, 2020
30 °C

ಬಿಜೆಪಿಗೆ ಹೊಸ ಅಧ್ಯಕ್ಷ: ಅಮಿತ್‌ ಶಾ ಸ್ಥಾನಕ್ಕೆ ನಡ್ಡಾ ಆಯ್ಕೆ ಬಹುತೇಕ ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಲಿದ್ದು, ಜಗತ್‌ ಪ್ರಕಾಶ್‌ ನಡ್ಡಾ (ಜೆ.‍ಪಿ.ನಡ್ಡಾ) ಆಯ್ಕೆ ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಧ್ಯಕ್ಷರ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲದಿರುವುದರಿಂದ ಸದ್ಯ ಪಕ್ಷದ ಕಾರ್ಯಾಧ್ಯಕ್ಷರಾಗಿರುವ ನಡ್ಡಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ವಿಶ್ವಾಸವನ್ನು ಮೂಲಗಳು ವ್ಯಕ್ತಪಡಿಸಿವೆ.

ಕಳೆದ ವರ್ಷದ ಜುಲೈನಲ್ಲಿ ನಡ್ಡಾ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಗೃಹ ಸಚಿವರಾಗಿರುವ ಅಮಿತ್‌ ಶಾ ಅಧ್ಯಕ್ಷರಾಗಿ ಮುಂದುವರಿದಿದ್ದರು. ಪಕ್ಷದ ಸಂಘಟನೆ ವಿಚಾರದಲ್ಲಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಅತ್ಯಂತ ನಂಬಿಕಸ್ಥ ನಾಯಕ ಜೆ.ಪಿ. ನಡ್ಡಾ ಆಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು