ಶುಕ್ರವಾರ, ಸೆಪ್ಟೆಂಬರ್ 25, 2020
28 °C

ಸಚಿವರಾಗಿ ನೇಮಕಗೊಂಡ ಬಳಿಕವೂ ಕಾರ್ಯಕರ್ತರಾಗಿ ದುಡಿಯಿರಿ: ಮೋದಿ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಂಸದರಾಗಿ ಆಯ್ಕೆಯಾಗಿ ಅಥವಾ ಸಚಿವರಾಗಿ ನೇಮಕಗೊಂಡ ಬಳಿಕವೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ತಳಮಟ್ಟದ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಸಂಸದರಿಗೆ ಶನಿವಾರ ಕರೆ ನೀಡಿದರು.

ಪಕ್ಷದಿಂದ ಆಯ್ಕೆಯಾಗಿರುವ ಸಂಸದರಿಗಾಗಿ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಪಕ್ಷ ಈ ಹಂತಕ್ಕೆ ಬೆಳೆದಿರುವುದು ಸಿದ್ಧಾಂತ ಹಾಗೂ ಚಿಂತನೆಗಳಿಂದಾಗಿಯೇ ಹೊರತು ಯಾವುದೋ ಒಂದು ಕುಟುಂಬದಿಂದಾಗಿ ಅಲ್ಲ’ ಎಂದರು. 

‘ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೇ, ವಿದ್ಯಾರ್ಥಿಗಳ ರೀತಿ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಧಾನಿ ಕಿವಿಮಾತು ಹೇಳಿದರು’ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು. 

ಸಂಸದರನ್ನು ಉದ್ದೇಶಿಸಿ ಪಕ್ಷದ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಕೂಡ ಮಾತನಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು