₹10 ಕೋಟಿಗೆ ಎಎಪಿ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ ಬಿಜೆಪಿ:ಮನೀಶ್ ಸಿಸೋಡಿಯಾ

ಬುಧವಾರ, ಮೇ 22, 2019
24 °C

₹10 ಕೋಟಿಗೆ ಎಎಪಿ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ ಬಿಜೆಪಿ:ಮನೀಶ್ ಸಿಸೋಡಿಯಾ

Published:
Updated:

ದೆಹಲಿ: ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ 40 ಶಾಸಕರು ತನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಕೂಡಲೇ ಟಿಎಂಸಿ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದರು.

ಮೋದಿ ಹೇಳಿಕೆಯ ನಂತರ ಇದೀಗ ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿ ಮಾಡಲು ಯತ್ನಿಸುತ್ತಿದೆ ಎಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ. ತಲಾ ₹10 ಕೋಟಿ ನೀಡಿ ಏಳು ಶಾಸಕರನ್ನು ಖರೀದಿ ಮಾಡಲು ಬಿಜೆಪಿ ಯತ್ನಿಸಿದೆ ಎಂದಿದ್ದಾರೆ ಸಿಸೋಡಿಯಾ.

ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಹೇಳಿದ ಅವರು, ಈ ಹಿಂದೆಯೂ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸಿತ್ತು. ಆದರೆ ಅವರಿಗೆ ರಾಜ್ಯದ ಜನರೇ ತಕ್ಕ ಉತ್ತರ ನೀಡಿದ್ದರು ಎಂದಿದ್ದಾರೆ.

ಬಿಜೆಪಿಗೆ ಯಾವುದೇ ಸಮಸ್ಯೆಗಳ ಬಗ್ಗೆ ಹೇಳಲು ಇಲ್ಲದೇ ಇರುವಾಗ ಅವರು ಕುದುರೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ತಲಾ ₹10 ಕೋಟಿ ನೀಡಿ ಅವರು ನಮ್ಮ 7 ಶಾಸಕರನ್ನು ಖರೀದಿಸಲು ಯತ್ನಿಸಿದ್ದಾರೆ ಎಂದು ಸಿಸೋಡಿಯಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪಶ್ಚಿಮ ಬಂಗಾಳ ಸೆರಾಂಪೋರ್‌ನಲ್ಲಿ ಮೋದಿ ಮಾಡಿದ ಭಾಷಣ ಖಂಡಿಸಿದ ಸಿಸೋಡಿಯಾ, ಪ್ರಧಾನಿಯೊಬ್ಬರು ಈ ರೀತಿ ಮಾತನಾಡಿದ್ದು ಸರಿಯಲ್ಲ.  ಪ್ರಧಾನಿಯವರಿಗೆ ಇಂತಾ ಮಾತುಗಳು ಶೋಭೆ ತರುವುದಿಲ್ಲ.ಭಾರತ ಪ್ರಜಾಪ್ರಭುತ್ವದ ದೇಶ ಮತ್ತು ಪ್ರಜಾಪ್ರಭುತ್ವದ ಕಾರಣವೇ ಮೋದಿ ಇಲ್ಲಿರುವುದು ಎಂದಿದ್ದಾರೆ.

ಆದಾಗ್ಯೂ, ಎಎಪಿ ಆರೋಪವನ್ನು ನಿರಾಕರಿಸಿದ ಬಿಜೆಪಿ ಗಮನ ಸೆಳೆಯುವುದಕ್ಕಾಗಿ ಎಎಪಿ ಈ ರೀತಿಯ ಆರೋಪಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಮಾಧ್ಯಮ ಮುಖ್ಯಸ್ಥ ಅಶೋಕ್ ಗೋಯಲ್ ಹೇಳಿದ್ದಾರೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 6

    Angry

Comments:

0 comments

Write the first review for this !