ಭುವನೇಶ್ವರ: ಭಾರತೀಯ ಜನತಾ ಪಕ್ಷ ಒಡಿಶಾ ರಾಜ್ಯದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಬಿಜೆಡಿ (ಬಿಜು ಜನತಾ ದಳ) ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ತಮ್ಮ ತಪ್ಪನ್ನು ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯವನ್ನುಅಭಿವೃದ್ಧಿಪಡಿಸುವಲ್ಲಿ ವಿಫಲರಾಗಿದ್ದಾರೆ, ಶ್ರಮಿಕರ ಮತ್ತು ರೈತರ ಹಿತ ಕಡೆಗಣಿಸಿರುವುದರಿಂದ ಅವರು ಸರ್ಕಾರದ ವಿರುದ್ಧ ಬಂಡಾಯ ಎದಿದ್ದಾರೆ. ಕೇಂದ್ರದ ಯೋಜನೆಗಳ ಬಗ್ಗೆ ಆಕರ್ಷಿತರಾಗಿರುವ ಒಡಿಶಾ ಜನತೆಪ್ರಧಾನಿ ಮೋದಿ ಅವರ ಕಡೆ ಮುಖ ಮಾಡಿದ್ದಾರೆ ಎಂದು ಪ್ರಧಾನ್ ತಿಳಿಸಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳ ಫಲವಾಗಿ ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹಾಗೇ ಹೆಚ್ಚು ಲೋಕಸಭೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದು ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ. ಒಂದು ವೇಳೆಬಿಜೆಡಿ ಎನ್‌ಡಿಎ ಸೇರಲು ಬಯಸಿದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅಂತಹ ಅವಕಾಶ ನಿರ್ಮಾಣವಾಗದು, ಹಾಗೇ ಬಿಜೆಡಿ ಜೊತೆಯಲ್ಲಿ ಹೊಂದಾಣಿಕೆ ಅಸಾಧ್ಯ ಎಂದು ಪ್ರಧಾನ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.