ಶನಿವಾರ, ಜೂನ್ 19, 2021
26 °C
ದೆಹಲಿಯಲ್ಲಿ ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ಚಂದ್ರಬಾಬು ನಾಯ್ಡು

ಎನ್‌ಡಿಎಗೆ ಪರ್ಯಾಯ ರಾಜಕೀಯ ಶಕ್ತಿ ರಚನೆ: ಚಂದ್ರಬಾಬು ನಾಯ್ಡು ವಿಶ್ವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ‘ಎನ್‌ಡಿಎ ಮೈತ್ರಿಕೂಟವನ್ನು ಅಧಿಕಾರದಿಂದ ದೂರವಿಡಲು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಒಗ್ಗೂಡಲಿವೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದರು. 

ಇಲ್ಲಿ ಶನಿವಾರ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಹಿತಾಸಕ್ತಿ ಕಾಪಾಡುವ ಉದ್ದೇಶಕ್ಕಾಗಿ ರಾಜಕೀಯ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ. ಕೆಲವರು ಚುನಾವಣೆಗೆ ಮುನ್ನ ಕೈಜೋಡಿಸಿದರೆ ಮತ್ತೆ ಕೆಲವು ಚುನಾವಣೆ ನಂತರ ಬಿಜೆಪಿಯೇತರ ಒಕ್ಕೂಟ ಸೇರಬಹುದು’ ಎಂದು ಹೇಳಿದರು.

ಇದನ್ನೂ ಓದಿ: ಎನ್‌ಸಿಪಿಯ ಹಿರಿಯ ನಾಯಕ ತಾರಿಕ್‌ ಅನ್ವರ್‌ ಕಾಂಗ್ರೆಸ್‌ ಸೇರ್ಪಡೆ​

‘ಪರ್ಯಾಯ ರಾಜಕೀಯ ಶಕ್ತಿ ರೂಪಿಸುವುದಕ್ಕೆ ಎಲ್ಲರೂ ಶ್ರಮಿಸಬೇಕು. ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಮತ್ತು ಆಮ್‌ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್‌ ಈಗಾಗಲೇ ಈ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದರು.

‘ಪರ್ಯಾಯ ಶಕ್ತಿ ರಚನೆ ಕಾರ್ಯಕ್ಕೆ ಯಾರಾದರೂ ನೇತೃತ್ವ ವಹಿಸಿದರೆ ನಾನು ಅವರನ್ನು ಬೆಂಬಲಿಸುತ್ತೇನೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ’ ಎಂದು ಅವರು ಹೇಳಿದರು.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಮಾತುಕತೆ ನಡೆಸಿದರು. 

ಇದನ್ನೂ ಓದಿ: ಕಾಂಗ್ರೆಸ್‌ನಿಂದ ವಂಚನೆಗೆ ಒಳಗಾದವರು ಶೀಘ್ರ #MeToo ಅನ್ನುತ್ತಾರೆ: ರಾಜನಾಥ್‌​

 ***

ಬಿಜೆಪಿ ಒತ್ತಡದ ಕಾರಣದಿಂದ ಕೆಲವರು ವಿರೋಧಿ ಮೈತ್ರಿಕೂಟ ಸೇರಲು ಭಯ ಪಡುತ್ತಿದ್ದಾರೆ. ಪ್ರಜಾಸತ್ತಾತ್ಮಕ ಒಕ್ಕೂಟ ರಚನೆಗೆ ಹಲವರನ್ನು ಭೇಟಿಯಾಗಲಿದ್ದೇನೆ.

– ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಮುಖ್ಯಮಂತ್ರಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು