ಶುಕ್ರವಾರ, ಫೆಬ್ರವರಿ 21, 2020
24 °C

ಬಿಜೆಪಿ ಕಾರ್ಯಕರ್ತರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ದಿಬ್ರೂಗರ್ (ಅಸ್ಸಾಂ): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಕೇಂದ್ರ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿ ಮೂವರನ್ನು ಬಂಧಿಸಲಾಗಿದೆ.  

ಆಹಾರ ಸಂಸ್ಕರಣೆ ಖಾತೆ ರಾಜ್ಯ ಸಚಿವ ತೇಲಿ ನಿವಾಸದ ಮೇಲೆ ಡಿ. 11ರಂದು ದಾಳಿ ನಡೆದಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಆಧರಿಸಿ ಭಾನುವಾರ ಮೂವರನ್ನು ಬಂಧಿಸಲಾಯಿತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಜಿತ್‌ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು 18 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ದೇಬಜಿತ್‌ ಹಜಾರಿಕಾ ಮತ್ತು ವಿಕಿ ಸೋನಾರ್ ಅವರು ಪಕ್ಷದ ಕಾರ್ಯಕರ್ತರು ಎಂಬುದನ್ನು ಬಿಜೆಪಿ ಕೂಡಾ ದೃಢಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು