ಶನಿವಾರ, ಏಪ್ರಿಲ್ 4, 2020
19 °C

ಅಮಿತ್‌ ಶಾ ರ‌್ಯಾಲಿಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಂದ ‘ಗೋಲಿ ಮಾರೋ’ ಕೂಗು

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದ ಶಾಹಿದ್‌ ಮಿನಾರ್‌ನಲ್ಲಿ ಆಯೋಜಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಮಾವೇಶಕ್ಕೆ ತೆರಳುತ್ತಿದ್ದ ಪಕ್ಷದ ಕಾರ್ಯಕರ್ತರು ‘ಗೋಲಿ ಮಾರೋ...’ ಘೋಷಣೆ ಕೂಗುತ್ತಾ ಹೋಗಿರುವುದಾಗಿ ವರದಿಯಾಗಿದೆ. 

ಪಕ್ಷದ ಬಾವುಟ ಹಿಡಿದು ಸಮಾವೇಶದ ಕಡೆಗೆ ಹೋಗುತ್ತಿದ್ದ ಕಾರ್ಯಕರ್ತರ ಪೈಕಿ ಒಂದು ಗುಂಪು ಈ ಘೋಷಣೆ ಮೊಳಗಿಸಿದೆ. 
ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೋಲ್ಕತ್ತಾ ಪೊಲೀಸರನ್ನು ಸಂಪರ್ಕಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಡು ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಮಾವೇಶಕ್ಕೆ ಇಂದು ಕೋಲ್ಕತಾಗೆ ತೆರಳಿದ್ದಾರೆ. 

ದೆಹಲಿ ವಿಧಾನಸಭೆ ಚುನಾವಣೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರವಾದ ಸಮಾವೇಶಗಳಲ್ಲಿ ‘ಗೋಲಿ ಮಾರೋ...’ ಘೋಷಣೆಗಳು ಮೊಳಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಈ ಘೋಷಣೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬಂದಿದ್ದವು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು