ಗುರುವಾರ , ಡಿಸೆಂಬರ್ 12, 2019
17 °C

ಕೇಜ್ರಿವಾಲ್ ಭಾಷಣಕ್ಕೆ ಅಡ್ಡಿ ಪಡಿಸಲು ಜೋರಾಗಿ ಕೆಮ್ಮಿದ ಬಿಜೆಪಿ ಕಾರ್ಯಕರ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡಲು ಆರಂಭಿಸಿದಾಗ ಬಿಜೆಪಿ ಕಾರ್ಯಕರ್ತರು ಜೋರಾಗಿ ಕೆಮ್ಮುತ್ತಾ ನಗೆಯಾಡಿ ಅಡ್ಡಿಪಡಿಸಿದ್ದಾರೆ.

ಗುರುವಾರ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಜ್ರಿವಾಲ್ ಭಾಷಣ ಆರಂಭಿಸಿದ ಕೂಡಲೇ ಬಿಜೆಪಿ ಕಾರ್ಯಕರ್ತರ ಗುಂಪೊಂದು ಮುಂದೆ ಬಂದು ನಿಂತು ಜೋರಾಗಿ ಕೆಮ್ಮಿದೆ.  ಬಿಜೆಪಿ ಕಾರ್ಯಕರ್ತರ ವರ್ತನೆ ನೋಡಿ, ಶಾಂತರಾಗಿರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅಷ್ಟೊತ್ತಿಗೆ ಕಾರ್ಯಕ್ರಮದಲ್ಲಿ ಆಸೀನರಾಗಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಕಾರ್ಯಕರ್ತರಲ್ಲಿ ಸುಮ್ಮನಿರಿ. ಇದು ಸರ್ಕಾರಿ ಕಾರ್ಯಕ್ರಮ ಎಂದಿದ್ದಾರೆ.
 ಷನಲ್ ಮಿಷನ್ ಫಾರ್ ಕ್ಲೀನ್  ಗಂಗಾ ಮತ್ತು ದೆಹಲಿ ಜಲ ನಿಗಮವು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕಾಗಿ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಜ್ರಿವಾಲ್‍ರನ್ನು ಬಿಜೆಪಿ ಕಾರ್ಯಕರ್ತರು ಈ ರೀತಿ ನಗೆಯಾಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು