ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಂಸ್ಥಾಪನಾ ದಿನಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶವಿದು 

Last Updated 6 ಏಪ್ರಿಲ್ 2020, 3:51 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಸ್ಥಾಪನೆ ಮಾಡಿ ಇಂದಿಗೆ 40 ವರ್ಷಗಳು ಸಂದಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಕಾರ್ಯಕರ್ತರು ಮುಖಂಡರಿಗೆ ಶುಭ ಕೋರಿದ್ದಾರೆ.

ಪಕ್ಷಕ್ಕೆ ಅಧಿಕಾರ ಸಿಕ್ಕಾಗೆಲ್ಲ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ದುಡಿದಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಏನಿದೆ ಪ್ರಧಾನಿ ಟ್ವೀಟ್‌ನಲ್ಲಿ?

ಬಿಜೆಪಿಯ ಕಾರ್ಯಕರ್ತರಿಗೆ ಶುಭಾಶಯಗಳು. ರಕ್ತ ಮತ್ತು ಬೆವರಿನಿಂದ ಪಕ್ಷಕ್ಕೆ ನೀರುಣಿಸಿದ ಎಲ್ಲರನ್ನೂ ನಾನು ಗೌರವಿಸುತ್ತೇನೆ. ಅವರ ಕಾರಣದಿಂದಾಗಿ ಇಂದು ದೇಶಾದ್ಯಂತ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಸಿಕ್ಕಿದೆ. ಪಕ್ಷದ ತತ್ವಗಳಿಗೆ ಅನುಸಾರವಾಗಿ, ನಮ್ಮ ಕಾರ್ಯಕರ್ತರು ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ. ಮತ್ತು, ಸಾಮಾಜ ಸೇವೆಯ ಹೊಸ ಮಾದರಿಯನ್ನು ನೀಡಿದ್ದಾರೆ. ದೇಶವು COVID-19 ವಿರುದ್ಧ ಹೋರಾಡುತ್ತಿರುವ ಈ ಸಮಯದಲ್ಲಿ ಬಿಜೆಪಿಯ 40ನೇ ಸಂಸ್ಥಾಪನಾ ದಿನವೂ ಬಂದಿದೆ. ಈ ಸಮಯದಲ್ಲಿ ಪಕ್ಷದ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರು ಮಾರ್ಗಸೂಚಿಗಳನ್ನು ಪಾಲಿಸುವಂತೆ ನಾನು ಆಗ್ರಹಿಸುತ್ತೇನೆ. ಕಾರ್ಯಕರ್ತರು ಅವುಗಳನ್ನು ಅನುಸರಿಸಬೇಕು. ಸಾಮಾಜಿಕ ಅಂತರ ಪಾಲಿಸಿ. COVID-19 ವಿರುದ್ಧ ಭಾರತವನ್ನು ಒಗ್ಗೂಡಿಸಿ ಮತ್ತು ಅದರಿಂದ ದೇಶವನ್ನು ಮುಕ್ತಗೊಳಿಸಿ,’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT