ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನ ದಹೇಜ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 40 ಕಾರ್ಮಿಕರಿಗೆ ಗಾಯ

Last Updated 3 ಜೂನ್ 2020, 14:19 IST
ಅಕ್ಷರ ಗಾತ್ರ

ಭರೂಚ್: ಗುಜರಾತ್‌ನ ಭರೂಚ್ ಜಿಲ್ಲೆಯ ದಹೆಜ್ಕೈಗಾರಿಕಾ ವಸಹಾತು ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 40 ಕಾರ್ಮಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಭರೂಚ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಯಶಸ್ವಿ ರಸಾಯನ್ ಪ್ರೈವೇಟ್ ಲಿಮಿಟೆಡ್’ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ.

ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದು ಭರೂಚ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸಮೀಪದ 2 ಗ್ರಾಮಗಳಿಂದ 4,800 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣ ಸಮೀಪದ ಎಲ್‌.ಜಿ.ಪಾಲಿಮರ್ಸ್‌ ರಾಸಾಯನಿಕ ಘಟಕದಲ್ಲಿ ಇತ್ತೀಚೆಗೆ ಸ್ಟೈರೀನ್‌ ಮೊನೊಮರ್‌ ಅನಿಲ ಸೋರಿಕೆಯಾಗಿ 11 ಮಂದಿ ಮೃತಪಟ್ಟು,ನೂರಾರು ಮಂದಿ ಅಸ್ವಸ್ಥಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT