ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಡೊ ಸಂಘಟನೆ: ಮತ್ತೆ ಐದು ವರ್ಷ ನಿಷೇಧ

Last Updated 24 ನವೆಂಬರ್ 2019, 19:31 IST
ಅಕ್ಷರ ಗಾತ್ರ

ನವದೆಹಲಿ: ಅಸ್ಸಾಂ ಮೂಲದ ಬೋಡೊ ಉಗ್ರ ಸಂಘಟನೆ ಎನ್‌ಡಿಎಫ್‌ಬಿ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷ ವಿಸ್ತರಿಸಿದೆ.

‘ನ್ಯಾಷನಲ್‌ ಡೆಮಾಕ್ರೆಟಿಕ್ ಫ್ರಂಟ್‌ ಆಫ್‌ ಬೋಡೊಲ್ಯಾಂಡ್‌ (ಎನ್‌ಡಿಎಫ್‌ಬಿ) ಸಂಘಟನೆಯು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿದ್ದು, ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದೆ. ಜತೆಗೆ, ಪ್ರತ್ಯೇಕ ಬೋಡೊಲ್ಯಾಂಡ್‌ ಹೊಂದುವ ಉದ್ದೇಶವನ್ನುಸಂಘಟನೆ ಹೊಂದಿದೆ’ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಸಂಘಟನೆಯು 62 ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದು 19 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ. 55 ಉಗ್ರರನ್ನು ಹತ್ಯೆ ಮಾಡಲಾಗಿದೆ. 450 ಮಂದಿ ಉಗ್ರರನ್ನು ಬಂಧಿಸಿ, 444 ಶಸ್ತ್ರಾತ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT