ಶನಿವಾರ, ಏಪ್ರಿಲ್ 17, 2021
31 °C

ಆತಂಕ ಸೃಷ್ಟಿಸಿದ ‘ಚಿನ್ನದ ಪೊಟ್ಟಣ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌–3ರ ಸ್ನಾನಗೃಹದಲ್ಲಿ ಸಿಕ್ಕ ‘ಪೊಟ್ಟಣ’ವೊಂದು ಶನಿವಾರ ಕೆಲಕಾಲ ಆತಂಕದ ವಾತಾವರಣಕ್ಕೆ ಕಾರಣವಾಗಿತ್ತು.

ಕಪ್ಪು ಪಟ್ಟಿಯಲ್ಲಿ ಸುತ್ತಿದ್ದ ಪೊಟ್ಟಣವನ್ನು ಬೆಳಗಿನ ಜಾವ ನೋಡಿದ ವ್ಯಕ್ತಿಯೊಬ್ಬರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ಪಡೆ ಕೂಡಲೇ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿತು.

ಪೊಟ್ಟಣವನ್ನು ಪರಿಶೀಲಿಸಿದಾಗ ಅದರಲ್ಲಿ  ಒಂದು ಕೆ.ಜಿ. ಚಿನ್ನದ ಗಟ್ಟಿ ಇರುವುದು ಗೊತ್ತಾದಾಗ ಎಲ್ಲರೂ ನಿಟ್ಟುಸಿರು ಬಿಟ್ಟರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು