ಶನಿವಾರ, ಡಿಸೆಂಬರ್ 7, 2019
25 °C

ಸರ್ಕಾರಿ ಸ್ವಾಮ್ಯದ ‘ಬಿಪಿಸಿಎಲ್‌’ ಖಾಸಗೀಕರಣದ ಪರಿಶೀಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಅನ್ನು ಖಾಸಗೀಕರಣಗೊಳಿಸುವ ಕುರಿತು ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶಿ ಇಂಧನ ಮಾರಾಟದಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿಸುವ ಉದ್ದೇಶದಿಂದ ಬಹುರಾಷ್ಟ್ರೀಯ ಕಂಪನಿಗೆ ಮಾರಾಟ ಮಾಡಲು ಮುಂದಾಗಿದೆ. ಬಿಪಿಸಿಎಲ್‌ನಲ್ಲಿ ಹೊಂದಿರುವ ಷೇರುಪಾಲಿನಲ್ಲಿ ಶೇ 53.3ರಷ್ಟನ್ನು ಮಾರಾಟ ಮಾಡುವ ಯೋಜನೆ ಹೊಂದಿದೆ. ಆದರೆ, ಇದಕ್ಕೆ ಸಂಸತ್‌ನ ಒಪ್ಪಿಗೆ ದೊರೆಯಬೇಕಿದೆ ಎಂದು ಅವರು ಹೇಳಿದ್ದಾರೆ.

ದೇಶದ ಅತಿದೊಡ್ಡ ತೈಲಾಗಾರ ಮತ್ತು ಇಂಧನದ ರಿಟೇಲ್‌ ಮಾರಾಟ ಕಂಪನಿಯಾಗಿರುವ ಬಿಪಿಸಿಎಲ್‌ ಅನ್ನು ಖಾಸಗೀಕರಣಗೊಳಿಸುವುದರಿಂದ ಸರ್ಕಾರದ ಷೇರು ವಿಕ್ರಯದ ಗುರಿ ತಲುಪಲು ಅನುಕೂಲ ಆಗಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಷೇರು ವಿಕ್ರಯದಿಂದ ₹ 1.05 ಲಕ್ಷ ಕೋಟಿ ಸಂಗ್ರಹಿಸುವಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ. ಸದ್ಯ, ಕಂಪನಿಯ ಬಂಡವಾಳ ಮಾರುಕಟ್ಟೆ ಮೌಲ್ಯ ₹ 1.02 ಲಕ್ಷ ಕೋಟಿ ಇದೆ. ಶೇ 26ರಷ್ಟು ಷೇರು ಮಾರಾಟ ಮಾಡಿದರೂ ₹ 26,500 ಕೋಟಿ ಸಂಗ್ರಹವಾಗಲಿದೆ ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು