ಭಾಗವತ ಪೂಂಜರಿಗೆ ಕಲಾರಂಗ ಪ್ರಶಸ್ತಿ

ಭಾನುವಾರ, ಏಪ್ರಿಲ್ 21, 2019
26 °C

ಭಾಗವತ ಪೂಂಜರಿಗೆ ಕಲಾರಂಗ ಪ್ರಶಸ್ತಿ

Published:
Updated:
Prajavani

ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ವತಿಯಿಂದ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ಭಾಗವತ, ರಂಗ ನಿರ್ದೇಶಕ ಬೊಟ್ಟಿಗೆರೆ ಪುರುಷೋತ್ತಮ ಪೂಂಜ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹40 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ 12ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್‌ ರಾವ್‌, ಕಾರ್ಯದರ್ಶಿ ಮುರಲಿ ಕಡೆಕಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !