ಗುರುವಾರ , ಮಾರ್ಚ್ 4, 2021
26 °C
ಕಾರವಾನ್ ವರದಿ ಆಧರಿಸಿ ಕಾಂಗ್ರೆಸ್ ವಾಗ್ದಾಳಿಗೆ ತಿರುಗೇಟು

ಕಾಂಗ್ರೆಸ್‌ನದ್ದು ಯುದ್ಧ ಶುರುವಾಗುವ ಮೊದಲೇ ಸೋತ ಪರಿಸ್ಥಿತಿ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾರವಾನ್‌’ ನಿಯತಕಾಲಿಕೆಯ ವರದಿ ಆಧರಿಸಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದು, ಕಾಂಗ್ರೆಸ್‌ ಪಕ್ಷದ್ದು ಯುದ್ಧ ಆರಂಭವಾಗುವ ಮೊದಲೇ ಸೋತ ಪರಿಸ್ಥಿತಿ ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಅವರಿಗೆ ಸೇರಿದ ಡೈರಿ ತಮ್ಮ ಬಳಿ ಇದ್ದು, ಅದರಲ್ಲಿ ಕೇಂದ್ರ ಸಚಿವರಾದ ಅರುಣ್‌ ಜೇಟ್ಲಿ, ನಿತಿನ್‌ ಗಡ್ಕರಿ, ರಾಜನಾಥ್‌ ಸಿಂಗ್‌ ಸೇರಿದಂತೆ ಕೆಲವು ನ್ಯಾಯಾಧೀಶರು ಹಾಗೂ ವಕೀಲರುಗಳಿಗೆ ಒಟ್ಟು ₹1,800 ಕೋಟಿ ಲಂಚ ನೀಡಿರುವ ಬಗ್ಗೆ ಬರೆಯಲಾಗಿದೆ ಎಂದು ಕಾರವಾನ್ ವರದಿ ಮಾಡಿತ್ತು.

ಇದನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ ನಡೆಸಿತ್ತು.

ಆರೋಪ ತಳ್ಳಿಹಾಕಿರುವ ಬಿಎಸ್‌ವೈ, ಕಾಂಗ್ರೆಸ್‌ ಪಕ್ಷ ಹಾಗೂ ಅದರ ನಾಯಕರು ಬೌದ್ಧಿಕ ದಿವಾಳಿತನಕ್ಕೊಳಗಾಗಿದ್ದಾರೆ. ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುತ್ತಿರುವುದನ್ನು ಕಂಡು ಅವರು ಹತಾಶರಾಗಿದ್ದಾರೆ. ಅವರು ಆರಂಭವಾಗುವ ಮೊದಲೇ ಯುದ್ಧ ಸೋತಿದ್ದಾರೆ. ಲಭ್ಯವಾಗಿರುವ ದಾಖಲೆಗಳು ನಕಲಿ ಮತ್ತು ಸುಳ್ಳು ಎಂಬುದನ್ನು ಐಟಿ ಅಧಿಕಾರಿಗಳು ಈಗಾಗಲೇ ಸಾಬೀತುಪಡಿಸಿದ್ದಾರೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು