ಮಂಗಳವಾರ, ಮಾರ್ಚ್ 2, 2021
29 °C

ಬಿಜೆಪಿ ದೂರವಿಡಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಎಸ್‌ಪಿ ಬೆಂಬಲ: ಮಾಯಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಬಹುಮತ ಕೊರತೆ ಇರುವ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ಹೇಳಿದ್ದಾರೆ. ಕಾಂಗ್ರೆಸ್‌ಗೆ ಎರಡು ಸ್ಥಾನ ಕೊರತೆ ಇತ್ತು. ಬಿಎಸ್‌ಪಿ ಎರಡು ಸ್ಥಾನ ಗೆದ್ದಿದೆ.

ಕಾಂಗ್ರೆಸ್‌ನ ಹಲವು ಸಿದ್ಧಾಂತಗಳನ್ನು ನಾವು ಒಪ್ಪುವುದಿಲ್ಲವಾದರೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎಂದು ಮಾಯಾವತಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈಗ ಮಧ್ಯಪ್ರದೇಶದಲ್ಲಿ ಬೆಂಬಲ ನೀಡುತ್ತಿದ್ದು, ಅಗತ್ಯಬಿದ್ದರೆ ರಾಜಸ್ಥಾನದಲ್ಲೂ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

* ಇದನ್ನೂ ಓದಿ: ಮಧ್ಯಪ್ರದೇಶ ಪೂರ್ಣ ಫಲಿತಾಂಶ ಪ್ರಕಟ: ಕಾಂಗ್ರೆಸ್‌ಗೆ ಬಹುಮತಕ್ಕೆ 2 ಸ್ಥಾನ ಕೊರತೆ

ಛತ್ತೀಸಗಡ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಜನರು ಬಿಜೆಪಿಗೆ ವಿರುದ್ಧವಾಗಿ ಮತನೀಡಿದ್ದಾರೆ ಎಂಬುದನ್ನು ಫಲಿತಾಂಶವೇ ತೋರಿದೆ. ಇತರ ಪರ್ಯಾಯಗಳ ಇಲ್ಲದಿರುವುದರಿಂದ ಕಾಂಗ್ರೆಸ್‌ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್‌ಗೆ ಸಮಾಜವಾದಿ ಪಾರ್ಟಿ(ಎಸ್ಪಿ) ಬೆಂಬಲ ನೀಡಲಿದೆ ಎಂದು ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ತಿಳಿಸಿದ್ದಾರೆ. ಎಸ್ಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ.

230 ಸಂಖ್ಯಾಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 116 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್‌ 114 ಸ್ಥಾನ ಗಳಿಸಿದ್ದು, ಎರಡು ಸ್ಥಾನಗಳ ಕೊರತೆ ಇದೆ. ಬಿಎಸ್‌ಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 109 ಸ್ಥಾನಗಳನ್ನಷ್ಟೇ ಗಳಿಸಿದೆ. ಎಸ್‌ಪಿ 1, ಇತರರು 4 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.

ಮಧ್ಯಪ್ರದೇಶದ ಚುನಾವಣೆ ಫಲಿತಾಂಶ ಮಂಗಳವಾರ ತಡರಾತ್ರಿವರೆಗೂ ಅಂತಿಮಗೊಂಡಿರಲಿಲ್ಲ. ಚುನಾವಣಾ ಆಯೋಗ ಬುಧವಾರ ಪೂರ್ಣ ಫಲಿತಾಂಶವನ್ನು ಪ್ರಕಟಿಸಿದೆ. 

* ಇದನ್ನೂ ಓದಿ: ಮಧ್ಯಪ್ರದೇಶ: ಫಲಿತಾಂಶಕ್ಕೂ ಮುನ್ನ ತಡರಾತ್ರಿ ರಾಜ್ಯಪಾಲರಿಗೆ ಕಾಂಗ್ರೆಸ್ ಪತ್ರ

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು