ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಕಾಮಧೇನು ಆಯೋಗ ರಚನೆ, ಗೋಕುಲ ಮಿಷನ್‌ಗೆ ₹750 ಕೋಟಿ

Last Updated 1 ಫೆಬ್ರುವರಿ 2019, 11:37 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿನ ಗೋವುಗಳ ಸಂಪನ್ಮೂಲ ಹೆಚ್ಚಿಸಲು ಕಾಮಧೇನು ಆಯೋಗ ರಚನೆ ಮಾಡಲಾಗುವುದು ಮತ್ತು ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಆದ್ಯತೆ ನೀಡಲು ರಾಷ್ಟ್ರೀಯ ಗೋಕುಲ ಮಿಷನ್‌ ಸ್ಥಾಪನೆಗೆ ₹750 ಕೋಟಿ ನೀಡಲು ಉದ್ದೇಶಿಸಲಾಗಿದೆ ಎಂದು ವಿತ್ತ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದರು.

ಗೋವು ಸಂಪನ್ಮೂಲ ಹೆಚ್ಚಿಸಲು ಮತ್ತು ಉತ್ಪನ್ನಗಳ ವೃದ್ಧಿಸುವ ಆಶಯದೊಂದಿಗೆ ರಾಷ್ಟ್ರೀಯ ಕಾಮಧೇನು ಆಯೋಗ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ತಳಿಗಳ ಅಭಿವೃದ್ಧಿಗೆ ಆದ್ಯತೆ ನೀಡುವುದನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಈ ಆಯೋಗವು ಗೋವುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಮತ್ತು ಕಲ್ಯಾಣ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಿದೆ.

ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ‘ರಾಷ್ಟ್ರೀಯ ಗೋಕುಲ ಮಿಷನ್‌’ಗೆ ಪ್ರಸಕ್ತ ಹಣಕಾಸು ವರ್ಷದಲ್ಲೇ ₹750 ಕೋಟಿಗೆ ಅನುದಾನವನ್ನು ಹೆಚ್ಚಿಸಲಾಗಿದೆ.

ಮೀನುಗಾರಿಕೆಗೆ ಪ್ರತ್ಯೇಕ ಇಲಾಖೆ
ಮೀನುಗಳ ಉತ್ಪಾದನೆಯಲ್ಲಿ ಭಾರತವು ಜಗತ್ತಿನಲ್ಲೇ ಎರಡನೇ ಸ್ಥಾನ ಹೊಂದಿದೆ. ಹೀಗಾಗಿ, ಈ ಕ್ಷೇತ್ರದ ಸುಸ್ಥಿರ ಮತ್ತು ಹೆಚ್ಚಿನ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಮೀನುಗಾರಿಕೆ ಇಲಾಖೆ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT