ಗುರುವಾರ , ಮೇ 6, 2021
23 °C

ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ನಾಲ್ಕು ಮಹಡಿಯ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟು, ಐದು ಮಂದಿ ಗಾಯಗೊಂಡಿರುವ ಘಟನೆ ಸಮೀಪದ ಭಿವಂಡಿ ಪಟ್ಟಣದಲ್ಲಿ ನಡೆದಿದೆ. 

ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ನಿವಾಸಿಗಳು ಪಾಲಿಕೆಗೆ ಮಾಹಿತಿ ನೀಡಿದ್ದರು. ಶುಕ್ರವಾರ ರಾತ್ರಿಯೇ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್‌ಡಿಎಂಸಿ) ಸಿಬ್ಬಂದಿ ಆಗಮಿಸಿ, ಕಟ್ಟಡದ ನಿವಾಸಿಗಳನ್ನು ಸ್ಥಳಾಂತರಿಸುತ್ತಿದ್ದರು. ಈ ವೇಳೆ ಬೆಳಗಿನ ಜಾವ 1.30ರ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ಆರ್‌ಡಿಎಂಸಿ ಮುಖ್ಯಸ್ಥ ಸಂತೋಷ್‌ ಕದಂ ಮಾಹಿತಿ ನೀಡಿದ್ದಾರೆ. 

ಮೃತರನ್ನು ಸಿರಾಜ್‌ ಅನ್ಸಾರಿ (26), ಮೊಹಮ್ಮದ್‌ ಶೇಖ್‌ (27) ಎಂದು ಗುರುತಿಸಲಾಗಿದೆ. ಗಾಯಗೊಂಡ ಐವರಲ್ಲಿ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಯಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಠಾಣೆ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಹಲವು ಮಂದಿ ಅವಶೇಷದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಕಟ್ಟಡ ಕುಸಿತದಿಂದ ಪಕ್ಕದಲ್ಲಿದ್ದ ಇತರ ಕಟ್ಟಡಗಳಿಗೂ ಹಾನಿ ಆಗಿದೆ ಎಂದು ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು