ದೆಹಲಿಯತ್ತ ಬಿಜೆಪಿ ಕಣ್ಣು

ಭಾನುವಾರ, ಜೂನ್ 16, 2019
28 °C

ದೆಹಲಿಯತ್ತ ಬಿಜೆಪಿ ಕಣ್ಣು

Published:
Updated:

ನವದೆಹಲಿ: ಮತಗಟ್ಟೆ ಸಮೀಕ್ಷೆ ಫಲಿತಾಂಶಗಳು ಪಕ್ಷಕ್ಕೆ ಪೂರಕವಾಗಿ ಇರುವುದರಿಂದ ಉತ್ಸುಕವಾಗಿರುವ ಬಿಜೆಪಿ, 2020ರಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದೆ. 

‘ರಾಜಧಾನಿಯಲ್ಲಿ ಪಕ್ಷದ ವರ್ಚಸ್ಸು ಹೆಚ್ಚಿಸುವ ಮೂಲಕ ಚುನಾವಣೆಗೆ ಸಜ್ಜಾಗಲು ನಿರ್ಧರಿಸಲಾಗಿದೆ. ಪಕ್ಷವು ಗಟ್ಟಿ ನೆಲೆ ಹೊಂದಿರುವ ಮೂರು ನಗರಪಾಲಿಕೆ ಪ್ರದೇಶಗಳಿಗೆ ಹೆಚ್ಚು ಒತ್ತು ನೀಡುತ್ತೇವೆ’ ಎಂದು ಬಿಜೆಪಿಯ ಮುಖಂಡರೊಬ್ಬರು ಹೇಳಿದ್ದಾರೆ. 

ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್‌ ತಿವಾರಿ ಅವರು ಪಕ್ಷದ ಸದಸ್ಯರ ಜೊತೆಗೆ ಈಗಾಗಲೇ ಸಮಾಲೋಚನೆ ಆರಂಭಿಸಿದ್ದಾರೆ. ನಗರಸಭೆಗಳ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಹಾಗು ಕಟ್ಟಡಗಳ ಇಲಾಖೆಯಲ್ಲಿನ ಭ್ರಷ್ಟಾಚಾರದ ವಿಷಯ ಪ್ರಮುಖವಾಗಿ ಚರ್ಚೆಗೆ ಒಳಪಡಬಹುದು ಎಂದು ಅಂದಾಜಿಸಲಾಗಿದೆ.

ದಕ್ಷಿಣ, ಉತ್ತರ ಮತ್ತು ಪಶ್ಚಿಮ ದೆಹಲಿ ನಗರಪಾಲಿಕೆಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. 2007ರಿಂದಲೂ ಸತತವಾಗಿ ಆಯ್ಕೆಯಾಗುತ್ತಿದೆ. ‘ಭ್ರಷ್ಟಾಚಾರ, ಅಸಮರ್ಪಕ ನಿರ್ವಹಣೆ ಸಂಬಂಧ ಎಎಪಿ ಮತ್ತು ಕಾಂಗ್ರೆಸ್‌ ಪಕ್ಷವು ನಿರಂತರವಾಗಿ ಬಿಜೆಪಿಯನ್ನು ತರಾಟೆಗೆ
ತೆಗೆದುಕೊಳ್ಳುತ್ತಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !