ಗುರುವಾರ , ಫೆಬ್ರವರಿ 27, 2020
19 °C

ಫಿರೋಜಾಬಾದ್‌| ಬಸ್‌‌ಗೆ ಡಿಕ್ಕಿ ಹೊಡೆದ ಟ್ರಕ್: ಭೀಕರ ಅಪಘಾತದಲ್ಲಿ 13 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿಟಿಐ: ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ13 ಮಂದಿ ಸಾವಿಗೀಡಾಗಿದ್ದಾರೆ. 8 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬುಧವಾರ ರಾತ್ರಿ 10 ಗಂಟೆಗೆ ಫಿರೋಜಾಬಾದ್‌ನ  ನಗ್ಲಾ ಖಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ)  ರಾಜೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸೈಫೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ವೈದ್ಯಾಧಿಕಾರಿ ಡಾ. ವಿಶ್ವ ದೀಪಕ್ 13 ಮಂದಿ ಸಾವಿಗೀಡಾಗಿದ್ದಾರೆ. 31 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ದೆಹಲಿಯಿಂದ ಮೊತಿಹರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.

ಗಾಯಗೊಂಡ ವ್ಯಕ್ತಿಗಳನ್ನು ಇತವಾಹ್‌ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು