ಶಿಲ್ಲಾಂಗ್ (ಮೇಘಾಲಯ): ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 10 ಜನರು ಇರಿತಕ್ಕೆ ಒಳಗಾಗಿದ್ದು, ಇಬ್ಬರು ಹತ್ಯೆಯಾಗಿದ್ದಾರೆ.

ಶನಿವಾರ ಭುಗಿಲೆದ್ದ ಹಿಂಸಾಚಾರ ಶಿಲ್ಲಾಂಗ್‌ನ ಹಲವು ಪ್ರದೇಶಗಳಲ್ಲಿ ಹರಡಿದ್ದು, ನಗರದಾದ್ಯಂತ ಬಿಗುವಿನ ವಾತಾವರಣ ಮುಂದುವರೆದಿದೆ.

ಶಿಲ್ಲಾಂಗ್‌ನ ಜಯಾವ್, ಲಾಂಗ್‌ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘರ್ಷಣೆಗಳಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಇಚಮತಿ ಪ್ರದೇಶದಲ್ಲಿ ಖಾಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಮತ್ತು ಸ್ಥಳೀಯರಲ್ಲದವರ ನಡುವೆ ಘರ್ಷಣೆ ಸಂಭವಿಸಿದ ಪರಿಣಾಮ ಸ್ಥಳೀಯ ಟ್ಯಾಕ್ಸಿ ಚಾಲಕನೊಬ್ಬ ಹತ್ಯೆಯಾಗಿದ್ದಾನೆ.

ಘಟನೆಯ ನಂತರ ಎಂಟು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ.

ಗಲಭೆ ಪೀಡಿತ ಶಿಲ್ಲಾಂಗ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಈಗಾಗಲೇ ಮೇಘಾಲಯಕ್ಕೆ ಆಗಮಿಸಿದ್ದು, ಇನ್ನೂ ಆರು ತುಕಡಿಗಳು ಬರಲಿವೆ ಎಂದು ವರದಿಯಾಗಿದೆ.

ಮೇಘಾಲಯ ಮುಖ್ಯಮಂತ್ರಿ ಸಂಗ್ಮಾ ಅವರು,‘ಜನರು ಹಿಂಸಾಚಾರದಿಂದ ದೂರವಿರಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ‘ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.