ಭಾನುವಾರ, ಜುಲೈ 3, 2022
27 °C

ದೆಹಲಿ ಹಿಂಸಾಚಾರ: ನಿಯಂತ್ರಣಕ್ಕೆ ಅಮಿತ್‌ ಶಾ, ಕೇಜ್ರಿವಾಲ್‌ ಹರಸಾಹಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮಂಗಳವಾರ ಮಾತುಕತೆ ನಡೆಸಿದ್ದಾರೆ. 

ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯ ನಂತರ ಮಾತನಾಡಿರುವ ಅರವಿಂದ ಕೇಜ್ರಿವಾಲ್‌, ‘ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಆತಂಕಕ್ಕೀಡು ಮಾಡಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುಲಾಗುವುದು. ಅಗತ್ಯ ಬಿದ್ದರೆ ಸೇನೆಯನ್ನು ಕರೆಸಿಕೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ಗೃಹ ಸಚಿವರು ನೀಡಿದ್ದಾರೆ‘ ಎಂದು ತಿಳಿಸಿದ್ದಾರೆ. 

‘ತಮ್ಮ ಮೇಲಿನ ಅಧಿಕಾರಿಗಳು ಆಜ್ಞೆ ಮಾಡದ ಹೊರತು ತಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಈ ವಿಚಾರವಾಗಿ ಕೇಂದ್ರ ಗೃಹ ಸಚಿವರ ಬಳಿ ಮಾತನಾಡುತ್ತೇನೆ‘ ಎಂದು ದೆಹಲಿ ಸಿಎಂ ಕೇಜ್ರಿವಾಲ್‌ ಹೇಳಿದ್ದಾರೆ.

ಅಗತ್ಯ ಬಿದ್ದರೆ ಹೊರಗಿನವರು ಒಳನುಸುಳದಂತೆ ದೆಹಲಿಯ ಸರಹದ್ದುಗಳನ್ನು ಮುಚ್ಚಲಾಗುವುದು ಎಂದು ಅವರು ತಿಳಿಸಿದ್ದಾರೆ. 

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿ ಅಮಿತ್ ಶಾ ಸೋಮವಾರ ತಡರಾತ್ರಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿದ್ದರು. ಇದಾದ ಬಳಿಕ ಇಂದು ಸಭೆ ಕರೆದಿದ್ದರು.

ಸೋಮವಾರ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಪೊಲೀಸ್ ಹೆಡ್‌ಕಾನ್ಸ್‌ಟೆಬಲ್ ಸೇರಿ ಏಳು ಜನ ಮೃತಪಟ್ಟಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು