ಮಂಗಳವಾರ, ಏಪ್ರಿಲ್ 7, 2020
19 °C

ದೆಹಲಿ ಹಿಂಸಾಚಾರ: ಬಂದೂಕಿನಿಂದ ಗುಂಡು ಹಾರಿಸಿದ ಯುವಕ ಶಾರುಖ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿ ಜಫ್ರಾಬಾದ್‌ನಲ್ಲಿ ಸೋಮವಾರ ನಡೆದ ಹಿಂಸಾಚಾರದ ವೇಳೆ ಕೈಯಲ್ಲಿ ಬಂದೂಕು ಹಿಡಿದು ಪೊಲೀಸ್‌ ಅಧಿಕಾರಿಗೆ ಬೆದರಿಕೆಯೊಡ್ಡಿದ್ದ ಯುವಕನ ಚಿತ್ರ ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಸಿಎಎ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ಬಂದೂಕು ಪ್ರದರ್ಶಿಸಿದ ಯುವಕನನ್ನು ಶಾರುಖ್‌ ಎಂದು ಗುರುತಿಸಲಾಗಿದೆ. 

ಸಿಎಎ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜನರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಯುವಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಬಂದೂಕು ತೋರಿಸಿ ಹಿಂದೆ ಸರಿಯುವಂತೆ ಬೆದರಿಕೆ ಹಾಕಿದ್ದ. ಆ ವೇಳೆ ಪೊಲೀಸ್‌ ಅಧಿಕಾರಿ ಯುವಕನ ಬೆದರಿಕೆಗೆ ಜಗ್ಗದೇ, ಎರಡು ಕೈ ಎತ್ತಿ ಮುಂದೆ ಬಂದಾಗ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್‌ನಲ್ಲಿ ಚಿತ್ರಿಕರಿಸಿಕೊಂಡಿದ್ದರು. 

ಆ ಯುವಕನನ್ನು ಬಂಧಿಸಿರುವ ದೆಹಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. 

ಈಶಾನ್ಯ ದೆಹಲಿಯಲ್ಲಿ ಸಿಎಎ ಪರ–ವಿರುದ್ದದ ಗುಂಪುಗಳು ನಡುವೆ ಭಾನುವಾರ ‍ಸಂಘರ್ಷ ಉಂಟಾಗಿತ್ತು. ಸೋಮುವಾರವೂ ಮುಂದುವರೆದ ಹಿಂಸಾಚಾರದಲ್ಲಿ ಏಳು ಜನರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು