ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10 ಮೀಸಲಾತಿ

7

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10 ಮೀಸಲಾತಿ

Published:
Updated:

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಲು ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸೋಮವಾರ ಸಮ್ಮತಿಸಿದೆ. 

ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದೀಗ ಕೇಂದ್ರ ಸರ್ಕಾರ ಮೇಲ್ಜಾತಿಯ ಜನರಿಗೆ ಸರ್ಕಾರಿ ಕೆಲಸಗಳಲ್ಲಿ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದೆ. ವಾರ್ಷಿಕ ₹8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರು ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ. 

ಸಂವಿಧಾನದ ಅನುಚ್ಛೇದ 15 ಮತ್ತು 16ರಲ್ಲಿ ತಿದ್ದುಪಡಿಗೆ ಸಂಸತ್ತಿನಲ್ಲಿ ಮಸೂದೆ ಅಂಗೀಕೃತಗೊಳ್ಳಬೇಕಾಗುತ್ತದೆ. ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ಮಿತಿಯನ್ನು ಸುಪ್ರೀಂ ಕೋರ್ಟ್‌ ಗರಿಷ್ಠ ಶೇ 50ಕ್ಕೆ ನಿಗದಿ ಪಡಿಸಿದೆ. 

ವರದಿಗಳ ಪ್ರಕಾರ, ಸರ್ಕಾರ ಸಂಸತ್‌ ಅಧಿವೇಶನದ ಕೊನೆಯ ದಿನವಾದ ಮಂಗಳವಾರ ಮಸೂದೆಯನ್ನು ಪ್ರಸ್ತುತ ಪಡಿಸಲಿದೆ. 

ಬರಹ ಇಷ್ಟವಾಯಿತೆ?

 • 48

  Happy
 • 3

  Amused
 • 1

  Sad
 • 2

  Frustrated
 • 19

  Angry

Comments:

0 comments

Write the first review for this !