ಶನಿವಾರ, ಆಗಸ್ಟ್ 24, 2019
27 °C

ಸಂಪುಟ ವಿಸ್ತರಣೆ 9ಕ್ಕೆ

Published:
Updated:

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬುಧವಾರ ಅಂಕಿತ ಸಿಗುವ ಸಾಧ್ಯತೆ ಇದ್ದು, ಇದೇ 9ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಂಭವ ಇದೆ.

ಸಂಭಾವ್ಯರ ಪಟ್ಟಿ ಹೊತ್ತುಕೊಂಡು ನವದೆಹಲಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. 

‘ಸಂಪುಟದಲ್ಲಿ ಯಾರು ಇರಬೇಕು ಎಂಬ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಜತೆ ಮಾತುಕತೆ ನಡೆಸಿರುವ ಶಾ, ಯಡಿಯೂರಪ್ಪ ಜತೆ ಚರ್ಚೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.

Post Comments (+)