ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ: ಯುವಜನಾಂಗಕ್ಕೆ ಆದ್ಯತೆ?

Last Updated 28 ಮೇ 2019, 16:52 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬರಲಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟು ಮತ್ತು ಪಕ್ಷದಲ್ಲಿ ಮುಂದಿನ ತಲೆಮಾರಿನ ನಾಯಕರ ಸೃಷ್ಟಿಗೆ ಒತ್ತುಕೊಟ್ಟು ಮೋದಿ ಅವರು ಈ ಬಾರಿ ಸಚಿವ ಸಂಪುಟ ರಚಿಸಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಮೋದಿ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದು, ಮುಂದಿನ ಸಂಪುಟದಲ್ಲಿ ಅವರೂ ಪ್ರಮುಖ ಖಾತೆಯೊಂದನ್ನು ಪಡೆಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿಯ ಕೆಲವು ಹಿರಿಯ ನಾಯಕರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲಿಲ್ಲ. ವಯಸ್ಸಿನ ಕಾರಣಕ್ಕೆ ಹಲವರಿಗೆ ಟಿಕೆಟ್‌ ನೀಡಲಾಗಿಲ್ಲ. ಆದ್ದರಿಂದ ಈ ಬಾರಿ ಸಚಿವ ಸಂಪುಟದ ಸರಾಸರಿ ವಯಸ್ಸು ಸಾಕಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ಇದೇ ವರ್ಷ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮುಂದಿನ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ, 2020ರಲ್ಲಿ ಬಿಹಾರ ಹಾಗೂ 2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ. ಆದ್ದರಿಂದ ಸಂಪುಟದಲ್ಲಿ ಈ ರಾಜ್ಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಲಭಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT