ಶುಕ್ರವಾರ, ಆಗಸ್ಟ್ 6, 2021
25 °C

ಗುಂಡು ಹಾರಿಸಿಕೊಂಡು ಪೊಲೀಸ್‌ ಸಿಬ್ಬಂದಿ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ರಾಜ್‌ನಂದಗಾಂವ್‌: ಛತ್ತೀಸ‌ಗಢ ಸಶಸ್ತ್ರ ಪಡೆಯ ಸಿಬ್ಬಂದಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಆತ್ಮಹತ್ಯೆ ಮಾಡಿಕೊಂಡ ಅಬ್ದುಲ್‌ ಶಾಹಿದ್‌ ಹೆಡ್‌ ಕಾನ್‌ಸ್ಟೇಬಲ್‌ ಆಗಿದ್ದರು. ಘಾಗರಾ ಗ್ರಾಮದಲ್ಲಿ ಇದ್ದ ಕ್ಯಾಂಪ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಂಗಳವಾರ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ಅವರು ತಿಳಿಸಿದರು.

‘ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ, ಮಾರ್ಗ ಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾರೆ’ ಎಂದು ತಿಳಿಸಿದರು.

‘ಶುಕ್ಲಾ ಅವರು ಮೂಲತಃ ಉತ್ತರ ಪ್ರದೇಶದ ಝಾನ್ಸಿ ಅವರು. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್‌ನೋಟ್‌ ಇರಲಿಲ್ಲ. ಸಾವಿನ ಕುರಿತು ತನಿಖೆ ನಡೆಯುತ್ತಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು