ಕೋಲ್ಕತ್ತ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪೋಲೆಂಡ್ ಮೂಲದ ವಿದ್ಯಾರ್ಥಿಯೊಬ್ಬರಿಗೆ ಭಾರತ ಬಿಟ್ಟು ಹೋಗುವಂತೆ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ಗೆ ಕೋಲ್ಕತ್ತ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದನ್ಯಾಯಮೂರ್ತಿ ಸವ್ಯಸಾಚಿ ಭಟ್ಟಾಚಾರ್ಯ ಅವರು, ನೋಟಿಸ್‌ಗೆ ತಡೆ ನೀಡಿದ್ದಾರೆ.

ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕಮಿಲ್ ಸಿಜೆಂಸ್ಕಿ ಅವರಿಗೆ ಫೆ. 14ಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 9ರೊಳಗೆ ದೇಶ ತೊರೆಯಲು ಸೂಚಿಸಲಾಗಿತ್ತು.

ವಿದ್ಯಾರ್ಥಿ ವೀಸಾ ಹೊಂದಿರುವ ಕಾರಣ ಈ ವಿದ್ಯಾರ್ಥಿ ಭಾರತೀಯ ಸಂಸತ್ತು ಅಂಗೀಕರಿಸಿದ ಕಾನೂನನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.