ಶನಿವಾರ, ಜೂಲೈ 11, 2020
21 °C

ಚೀನಾ ಯೋಧರು ಗಡಿ ಪ್ರವೇಶಿಸಿದ್ದಾರೆಯೇ? ಸ್ಪಷ್ಟ ಉತ್ತರಕ್ಕೆ ರಾಹುಲ್‌ ಗಾಂಧಿ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಡಾಖ್‌ ಬಳಿ ಗಡಿಯಲ್ಲಿ ಸಂಘರ್ಷ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ನಡುವೆಯೇ, ಚೀನಾದ ಯೋಧರು ದೇಶದ ಗಡಿ ಪ್ರವೇಶಿಸಿದ್ದಾರೆಯೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಆಗ್ರಹಿಸಿದ್ದಾರೆ.

‘ಚೀನಾದ ಕೆಲವು ಯೋಧರು ಲಡಾಖ್‌ನ ಪೂರ್ವ ಭಾಗದ ಗಡಿಯೊಳಗೆ ನುಗ್ಗಿದ್ದರು. ನಮ್ಮ ಯೋಧರು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯವಿದ್ದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ‘ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹೇಳಿದ್ದರು. ಇದರ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಟ್ವಿಟರ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಈ ರೀತಿ ಪ್ರಶ್ನಿಸಿದ್ದಾರೆ.

‘ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆ ಸಂಬಂಧ ಉಭಯ ದೇಶಗಳ ಸೇನೆಯ ಉನ್ನತ ಅಧಿಕಾರಿಗಳು ಜೂನ್‌ 6ರಂದು ಸಭೆ ನಡೆಸಲಿದ್ದಾರೆ’ ಎಂಬ ವರದಿಯನ್ನು ಸಹ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಸರ್ಕಾರ ಮೌನವಾಗಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಡುತ್ತಿದೆ. ಹೀಗಾಗಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ದೇಶಕ್ಕೆ ಸ್ಪಷ್ಟ ಮಾಹಿತಿ ನೀಡಬೇಕು‘ ಎಂದೂ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು