ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೋಷಾರೋಪ ನಿಗದಿ ವಿಚಾರಣೆ ಆರಂಭ

Last Updated 26 ನವೆಂಬರ್ 2019, 8:49 IST
ಅಕ್ಷರ ಗಾತ್ರ

ಬೆಂಗಳೂರು:ನೋಟು ಅಮಾನ್ಯೀಕರಣದ ವೇಳೆ ಆದಾಯ ಇಲಾಖೆ ಅಧಿಕಾರಿಗಳು₹ 8.60 ಕೋಟಿ ಅಕ್ರಮ ಹಣ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ದೋಷಾರೋಪ ನಿಗದಿಪಡಿಸಲಿದೆ.

‘ನನ್ನನ್ನು ಪ್ರಕರಣದಿಂದ ಕೈಬಿಡಬೇಕು’ಎಂದು ಕೋರಿದ್ದ ಶಿವಕುಮಾರ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಇಲ್ಲಿನ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ಕ್ಕೆ ಹಾಜರಾಗಿದ್ದರು.

ನ್ಯಾಯಾಧೀಶ ರಾಮಚಂದ್ರ ಡಿ‌. ಹುದ್ದಾರ ಅವರು ಡಿಸೆಂಬರ್ 12ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT