ಶುಕ್ರವಾರ, ಜೂನ್ 5, 2020
27 °C

ಲಾಕ್‌‌ಡೌನ್ ನಿಯಮ ಉಲ್ಲಂಘನೆ: ದೆಹಲಿ ದಾತಿ ಮಹಾರಾಜ್ ವಿರುದ್ಧ ಪ್ರಕರಣ ದಾಖಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯಲ್ಲಿ ಲಾಕ್‌‌ಡೌನ್ ಜಾರಿಯಲ್ಲಿದ್ದರೂ ದೇವಸ್ಥಾನದ ಬಾಗಿಲು ತೆರೆದು ಭಕ್ತಾದಿಗಳನ್ನು ಗುಂಪು ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ದಾತಿ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘನೆ, ಭಾರತೀಯ ದಂಡ ಸಂಹಿತೆ ಪ್ರಕಾರ ಕೃತ್ಯ ಎಸಗಿರುವುದು ಕಂಡು ಬಂದಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ದೆಹಲಿ ವಿಭಾಗದ ಡಿಸಿಪಿ ಅತುಲ್ ಟಾಕೂರ್ ತಿಳಿಸಿದ್ದಾರೆ.

ದಕ್ಷಿಣ ದೆಹಲಿಯಲ್ಲಿರುವ ಮೆಹೋಲಿಯಲ್ಲಿ ದೇವಸ್ಥಾನದ ಬಾಗಿಲನ್ನು ಶುಕ್ರವಾರ ತೆಗೆದು ಭಕ್ತಾದಿಗಳನ್ನು ಸೇರಿಸಿದ್ದರು ಎಂಬ ವಿಷಯದ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು