ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ತಾರತಮ್ಯ ವಿಚಾರಣೆಗೆ ಸಮಿತಿ: ಯುಜಿಸಿ ಸೂಚನೆ

Last Updated 27 ಜೂನ್ 2019, 18:52 IST
ಅಕ್ಷರ ಗಾತ್ರ

ನವದೆಹಲಿ: ಜಾತಿ ತಾರತಮ್ಯ ಕುರಿತಂತೆ ದೂರು ದಾಖಲಿಸಲು ತಮ್ಮ ಸಂಸ್ಥೆಗಳ ವೆಬ್‌ಸೈಟ್‌ನಲ್ಲಿ ಪ್ರತ್ಯೇಕ ಪುಟ ರಚಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದೆ.

ಜಾತಿ ತಾರತಮ್ಯದಿಂದ ನೊಂದವರು ದೂರು ದಾಖಲಿಸಲು ಅನುವಾಗುವಂತೆ ವಿಶ್ವವಿದ್ಯಾಲಯಗಳ ಕುಲಸಚಿವರು, ಮಾನ್ಯತೆ ಪಡೆದ ಕಾಲೇಜುಗಳ ಪ್ರಾಂಶುಪಾಲರ ಕೊಠಡಿಯಲ್ಲಿ ಪ್ರತ್ಯೇಕ ದಾಖಲಾತಿ ಪುಸ್ತಕ ಇಡಬೇಕು ಎಂದು ಸೂಚಿಸಲಾಗಿದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಎದುರಿಸುವ ಇಂಥ ಪ್ರಕರಣಗಳ ವಿಚಾರಣೆಗೆ ಸಮಿತಿ ರಚಿಸಬೇಕು ಎಂದು ಯುಜಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT