ಬುಧವಾರ, ಡಿಸೆಂಬರ್ 2, 2020
20 °C
ಮುಂಗಾರು ಹಂಗಾಮಿನ ನಿರ್ವಹಣೆ ಚರ್ಚೆ

ಕಾವೇರಿ: ಪ್ರಾಧಿಕಾರದ ಸಭೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ಕಾವೇರಿ ನದಿ ನೀರಿನ ಹಂಚಿಕೆ, ಬೇಸಿಗೆ ಮುಗಿಯುವವರೆಗೆ ನೀರಿನ ನಿರ್ವಹಣೆ, ಮತ್ತಿತರ ವಿಷಯಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ನಡೆಯಲಿದೆ.

2018–19ನೇ ಸಾಲಿನ ಕೊನೆಯ ಸಭೆ ಇದಾಗಲಿದ್ದು, ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ದ ಮುಖ್ಯಸ್ಥರಾಗಿರುವ ಮಸೂದ್‌ ಹುಸೇನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಡಬ್ಲ್ಯೂಸಿ ಕಚೇರಿಯ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸುವರು.

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆ ಸುರಿಯುವ ಸಾಧ್ಯತೆ, ಜಲಾಶಯಗಳ ಒಳಹರಿವು ಮತ್ತು ಹೊರಹರಿವು, ಜಲಾನಯನ ಪ್ರದೇಶದಲ್ಲಿ ಲಭ್ಯವಾಗಲಿರುವ ನೀರಿನ ಸಮಗ್ರ ನಿರ್ವಹಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಪೂರ್ವಭಾವಿ ಚರ್ಚೆ ನಡೆಯಲಿದೆ.

ಕೃಷ್ಣರಾಜ ಸಾಗರ ಜಲಾಶಯ ವ್ಯಾಪ್ತಿಯ ರೈತರು ಬೇಸಿಗೆ ಬೆಳೆಗೆ ನೀರಿನ ಬೇಡಿಕೆ ಇರಿಸಿರುವುದರ ಕುರಿತೂ ಕರ್ನಾಟಕದ ಪ್ರತಿನಿಧಿಗಳು ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ.

ಆದರೆ, ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ಅಡಿ ನೀರನ್ನು ಕರ್ನಾಟಕದಿಂದ ಬಿಡುಗಡೆ ಮಾಡಿಸುವಂತೆ ತಮಿಳುನಾಡಿನ ಪ್ರತಿನಿಧಿಗಳು ಪ್ರಾಧಿಕಾರವನ್ನು ಒತ್ತಾಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು