ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ರದ್ದುಪಡಿಸಿ: ತಮಿಳುನಾಡು ಒತ್ತಾಯ

Last Updated 27 ನವೆಂಬರ್ 2018, 19:53 IST
ಅಕ್ಷರ ಗಾತ್ರ

ಚೆನ್ನೈ: ಮೇಕೆದಾಟುವಿನಲ್ಲಿ ಪ್ರಸ್ತಾವಿತ ಸಮತೋಲನ ಜಲಾಶಯದ ವಿವರವಾದ ಯೋಜನಾ ವರದಿ ತಯಾರಿಸಲು ಕರ್ನಾಟಕಕ್ಕೆ ನೀಡಿದ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೋರಿದ್ದಾರೆ.

ಈ ವಿಚಾರದ ಕಾರ್ಯಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರ ಸೆಪ್ಟೆಂಬರ್‌ನಲ್ಲಿ ವಿರೋಧಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪಳನಿಸ್ವಾಮಿ ನೆನಪಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ತಮಿಳುನಾಡಿನ ಸಹಮತ ಕೋರಬೇಕು ಎಂದು ಹಿಂದೆ ಒತ್ತಾಯಿಸಿದ್ದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಮಿಳುನಾಡಿನ ಸಮರ್ಥನೀಯವಾದ ಆಕ್ಷೇಪಗಳನ್ನು ಕಡೆಗಣಿಸಿ ಕರ್ನಾಟಕಕ್ಕೆ ಅನುಮತಿ ನೀಡಲಾಗಿದೆ ಎಂದೂ ಪಳನಿಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT