ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಜಾಧವ್ ವಿರುದ್ಧ ಎಫ್‌ಐಆರ್

7
ನೇಮಕಾತಿ, ಬಡ್ತಿಯಲ್ಲಿ ನಿಯಮ ಉಲ್ಲಂಘನೆ ಆರೋಪ

ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಜಾಧವ್ ವಿರುದ್ಧ ಎಫ್‌ಐಆರ್

Published:
Updated:
Prajavani

ನವದೆಹಲಿ: ಬಡ್ತಿ ನೀಡಿಕೆ ಹಾಗೂ ನೇಮಕಾತಿ ವೇಳೆ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಅರವಿಂದ್ ಜಾಧವ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಪಿ ನಖ್ವಾ (ಸಿಬ್ಬಂದಿ ವಿಭಾಗ), ಹೆಚ್ಚುವರಿ ಜನರಲ್ ಮ್ಯಾನೇಜರ್‌ಗಳಾದ (ಕಾರ್ಯಾಚರಣೆ), ಎ.ಕಠಪಾಲಿಯಾ, ಅಮಿತಾಭ್ ಸಿಂಗ್ ಮತ್ತು ರೋಹಿತ್ ಭಾಸಿನ್ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. 

ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಕ್ರಿಮಿನಲ್ ಸಂಚಿಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಧಿಕಾರಿಗಳನ್ನು ಜನರಲ್ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡುವ ಉದ್ದೇಶದಿಂದ 2010ರಲ್ಲಿ ಸಮಿತಿಯೊಂದನ್ನು ರಚಿಸಿದ್ದ ಜಾಧವ್, ನಿಯಮಾವಳಿಗಳನ್ನು ಉಲ್ಲಂಘಿಸಿದ್ದರು ಎಂದು ಸಿಬಿಐ ಆರೋಪಿಸಿದೆ. 

ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಆರೋಗ್ಯ ಸೇವೆ) ನಖ್ವಾ ಅವರ ನೇಮಕಾತಿಯನ್ನು ನಾಗರಿಕ ವಿಮಾನಯಾನ ಸಚಿವಾಲಯ ಅನೂರ್ಜಿತಗೊಳಿಸಿತ್ತು. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !