ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಕೇಶ್ ಅಸ್ತಾನಾ ನ್ಯಾಯಾಂಗ ಬಂಧನ ಅವಧಿ ಮುಂದೂಡಿದ ದೆಹಲಿ ಹೈಕೋರ್ಟ್

Last Updated 29 ಅಕ್ಟೋಬರ್ 2018, 11:06 IST
ಅಕ್ಷರ ಗಾತ್ರ

ನವದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಿಬಿಐನ ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಅಸ್ತಾನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ನವೆಂಬರ್ 01ರ ಗುರುವಾರದವರೆಗೆ ಅಸ್ತಾನಾ ಅವರನ್ನು ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಅಸ್ತಾನಾ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಅರ್ಜಿಗೆ ಪ್ರತಿಕ್ರಿಯಿಸಲುಸಿಬಿಐ ಹೆಚ್ಚಿನ ಕಾಲಾವಕಾಶ ಕೋರಿತ್ತು. ಇದಾದ ಬಳಿಕಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಲಂಚ ಪಡೆದ ಆರೋಪದಲ್ಲಿ ಅಸ್ತಾನಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ.

ಈ ಭ್ರಷ್ಟಾಚಾರ ಪ್ರಕರಣ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲಮತ್ತು ಕೇಂದ್ರ ಜಾಗೃತ ಆಯೋಗದಬಳಿ ಯಾವುದೇ ದಾಖಲೆಗಳಿಲ್ಲ ಎಂದು ಸಿಬಿಐ ಹೈಕೋರ್ಟ್‌ಗೆ ಹೇಳಿತ್ತು.

ಭ್ರಷ್ಟಾಚಾರ ಆರೋಪ ಸಂಬಂಧ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಅಸ್ತಾನಾ ಅವರನ್ನು ತನಿಖೆಗೊಳಪಡಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT