ಬುಧವಾರ, ಏಪ್ರಿಲ್ 8, 2020
19 °C
ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಮೇಲೆ ಸಿಬಿಐ ದಾಳಿ

ಅಮ್ನೆಸ್ಟಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಸಿಬಿಐ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Amnesty India

ಬೆಂಗಳೂರು: ವಿದೇಶಿ ದೇಣಿಗೆ ಸಂಬಂಧದ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್‌ ಇಂಡಿಯಾ (ಎಐಐ) ಬೆಂಗಳೂರು ಹಾಗೂ ನವದೆಹಲಿ ಕಚೇರಿಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿ ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ.

ಬೆಳಿಗ್ಗೆ 10 ಗಂಟೆಗೆ ಆರಂಭವಾದ ದಾಳಿ ಸಂಜೆವರೆಗೂ ನಡೆಯಿತು. ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಕಚೇರಿ ಪ್ರತಿನಿಧಿಗಳನ್ನು ಪ್ರಶ್ನಿಸಲಾಯಿತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಆದರೆ, ಈ ದಾಳಿ ಕುರಿತು ತನಿಖಾ ಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಎಐಐ ಮೂಲಗಳು ದಾಳಿ ನಡೆದಿರುವುದನ್ನು ಖಚಿತಪಡಿಸಿವೆ.

ಕಿರುಕುಳ ಆರೋಪ: ‘ಮಾನವ ಹಕ್ಕುಗಳ ಪರವಾಗಿ ಹೋರಾಡುವ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಮೇಲೆ ದಾಳಿ ನಡೆಸಿ ಕಿರುಕುಳ ನೀಡಲಾಗುತ್ತಿದೆ’ ಎಂದು ಸಂಘಟನೆ ಆರೋಪಿಸಿದೆ. ಇಂಥ ದಾಳಿಗಳ ಮೂಲಕ ಸಂಸ್ಥೆಯ ಸೊಲ್ಲಡಗಿಸಲು ಸಾಧ್ಯವಿಲ್ಲ ಎಂದೂ ಅದು ಹೇಳಿದೆ. 

ಕಳೆದ ವರ್ಷ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೇ ಸಂಸ್ಥೆಯ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.

ಇದನ್ನೂ ಓದಿಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಕಚೇರಿ ಮೇಲೆ ಇ.ಡಿ ದಾಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು