ಸೋಮವಾರ, ಸೆಪ್ಟೆಂಬರ್ 21, 2020
27 °C

110 ಕಡೆ ಸಿಬಿಐ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭ್ರಷ್ಟಾಚಾರ, ಶಸ್ತ್ರಾಸ್ತ್ರ ಕಳ್ಳ ಸಾಗಾಣಿಕೆ ಹಾಗೂ ಕ್ರಿಮಿನಲ್‌ ದುರ್ನಡತೆಗೆ ಸಂಬಂಧಿಸಿದಂಥ ದೂರುಗಳ ಆಧಾರದಲ್ಲಿ ಸಿಬಿಐ ಅಧಿಕಾರಿಗಳು ಕರ್ನಾಟಕವೂ ಸೇರಿದಂತೆ 19 ರಾಜ್ಯಗಳ ಒಟ್ಟು 110 ಕಡೆಗಳಲ್ಲಿ ಮಂಗಳವಾರ ಶೋಧ ನಡೆಸಿದ್ದಾರೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ 30 ಹೊಸ ದೂರುಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವಾರದ ಅಂತರದಲ್ಲಿ ಸಿಬಿಐ ನಡೆಸಿದ ಎರಡನೇ ಬೃಹತ್‌ ಪ್ರಮಾಣದ ದಾಳಿ ಇದಾಗಿದೆ. ಬ್ಯಾಂಕಿಂಗ್‌ ಅಪರಾಧಕ್ಕೆ ಸಂಬಂಧಿಸಿದಂತೆ ಕಳೆದ ಮಂಗಳವಾರ ಇದೇ ರೀತಿಯ ಶೋಧವನ್ನು ಸಿಬಿಐ ಕೈಗೊಂಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು