ನವದೆಹಲಿ: ಈ ಬಾರಿಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ತಮ್ಮ ಶಾಲೆಗಳಲ್ಲಿ ಬರೆಯಲಿದ್ದಾರೆ ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ.

ಬಾಹ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ನೋಂದಣಿ ಮಾಡಿಕೊಂಡ ಶಾಲೆಗಳಲ್ಲೇ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಅಂತರ ಕಾಪಾಡಿಕೊಳ್ಳಬೇಕು. ಪರೀಕ್ಷೆಗೆ ಬರುವಾಗ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಮಾಸ್ಕ್ ಧರಿಸಿರಬೇಕು ಮತ್ತು ಸ್ಯಾನಿಟೈಸರ್ ತರಬೇಕು. ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಶಾಲೆಗಳಲ್ಲಿ ಮಾಡಬೇಕು ಎಂದು ತಿಳಿಸಿದ್ದಾರೆ.

ಲಾಕ್ಡೌನ್ಗಿಂತ ಮುನ್ನ ಮುಗಿದಿರುವ ಪರೀಕ್ಷೆಗಳ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಹೀಗಾಗಿ, ಜುಲೈ ಅಂತ್ಯದ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಸಿಬಿಎಸ್ಇ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ಮೌಲ್ಯಮಾಪನವನ್ನು ಮನೆಯಲ್ಲೇ ನಡೆಸಲಾಗುತ್ತಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 3000 ಮೌಲ್ಯಮಾಪನ ಕೇಂದ್ರಗಳನ್ನು ನಿಗದಿಪಡಿಸಿದೆ. ಈ ಕೇಂದ್ರಗಳಿಂದ ಉತ್ತರಪತ್ರಿಕೆಗಳನ್ನು ಶಿಕ್ಷಕರ ಮನೆಗೆ ತಲುಪಿಸಲಾಗುತ್ತಿದೆ. ಬಳಿಕ, ಅಲ್ಲಿಂದಲೇ ವಾಪಸ್ ಪಡೆಯಲಾಗುತ್ತಿದೆ.

ಪರೀಕ್ಷೆ ಮುಂದಕ್ಕೆ (ತಿರುವನಂತಪುರ): ಕೇರಳದಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಂಪುಟ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.