ಚಂಡಿಗಡ: ಸಿಬಿಎಸ್‌ಇ ಟಾಪರ್‌ ಮೇಲೆ ಸಾಮೂಹಿಕ ಅತ್ಯಾಚಾರ

7

ಚಂಡಿಗಡ: ಸಿಬಿಎಸ್‌ಇ ಟಾಪರ್‌ ಮೇಲೆ ಸಾಮೂಹಿಕ ಅತ್ಯಾಚಾರ

Published:
Updated:

ಚಂಡಿಗಡ: ಹರಿಯಾಣದ 19ರ ಯುವತಿಯ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಕೆಲವು ವರ್ಷಗಳ ಹಿಂದೆ ಪ್ರಥಮ ಸ್ಥಾನ ಪಡೆದಿದ್ದ ಯುವತಿಗೆ ರಾಷ್ಟ್ರಪತಿಯಿಂದ ಪ್ರಶಸ್ತಿ ಕೂಡ ಲಭಿಸಿತ್ತು. ಕೋಚಿಂಗ್‌ ಕೇಂದ್ರಕ್ಕೆ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ. ಮಹೀಂದರಗಡ ಜಿಲ್ಲೆಯಲ್ಲಿ ಈ ಕೃತ್ಯ ನಡೆದಿದೆ.

ಕೃತ್ಯ ನಡೆದು ಮೂರು ದಿನಗಳಾಗಿವೆ. ಆರೋ‍ಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಂತ್ರಸ್ತೆ ಮತ್ತು ಅವರ ಕುಟುಂಬವು ಕಚೇರಿಯಿಂದ ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಆರೋಪಿಗಳ ಹೆಸರನ್ನು ಸಂತ್ರಸ್ತೆ ತಿಳಿಸಿದ್ದಾರೆ. ಹಾಗಿದ್ದರೂ ಈವರೆಗೆ ಬಂಧನ ಆಗಿಲ್ಲ. 

ಹೇಳಿಕೆ ನೀಡಲು ಸ್ಥಳೀಯ ಪೊಲೀಸ್‌ ಠಾಣೆಗೆ ಬರುವಂತೆ ಯುವತಿಗೆ ತಿಳಿಸಲಾಗಿತ್ತು. ಆದರೆ ಅಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಯಿತು ಎಂದು ಯುವತಿಯ ಕುಟುಂಬ ಆರೋಪಿಸಿದೆ. 

ತಮ್ಮ ಗ್ರಾಮದ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ತಮ್ಮನ್ನು ಅಪಹರಿಸಿದರು. ಮತ್ತು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಂತ್ರಸ್ತೆಯು ದೂರು ನೀಡಲು ರಿವಾರಿ ಪೊಲೀಸ್‌ ಠಾಣೆಗೆ ಹೋದಾಗ ಇದು ತಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಪೊಲೀಸರು ವಾಪಸ್‌ ಕಳುಹಿಸಿದ್ದರು. ಮರುದಿನ ಪ್ರಕರಣವನ್ನು ಕನಿನಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಯಿತು. ಆರೋಪಿಗಳ ಬಂಧನಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ರಾಷ್ಟ್ರ ರಾಜಧಾನಿ ಪ್ರದೇಶದ ಗುರುಗ್ರಾಮ ಮತ್ತು ಫರೀದಾಬಾದ್‌ ರೀತಿಯಲ್ಲಿಯೇ ಹರಿಯಾಣ ಕೂಡ ಮಹಿಳೆಯರ ವಿರುದ್ಧದ ದೌರ್ಜನ್ಯಕ್ಕೆ ಕುಖ್ಯಾತವಾಗಿದೆ. ಗುರುಗ್ರಾಮ ಮತ್ತು ಫರೀದಾಬಾದ್‌ನಲ್ಲಿ ಅತ್ಯಾಚಾರ, ದೌರ್ಜನ್ಯ ಮತ್ತು ಅಪಹರಣದ ಐದು ಪ್ರಕರಣಗಳು ದಿನವೊಂದಕ್ಕೆ ದಾಖಲಾಗುತ್ತಿವೆ ಎಂದು ಅಂಕಿ ಅಂಶಗಳು ಹೇಳುತ್ತಿವೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !