ಭಾನುವಾರ, ಜೂಲೈ 5, 2020
28 °C

ಸಿಬಿಎಸ್‌ಇ: 10,12ನೇ ತರಗತಿ ಪರೀಕ್ಷೆಗಳಿಗೆ ದೇಶದಾದ್ಯಂತ 15,000 ಪರೀಕ್ಷಾ ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

exam

ನವದೆಹಲಿ: ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳನ್ನು ದೇಶದಾದ್ಯಂತವಿರುವ 15,000 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ. ಈ ಹಿಂದೆ  3,000 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿಬಿಎಸ್‌ಇ ತೀರ್ಮಾನಿಸಿತ್ತು .

ವಿದ್ಯಾರ್ಥಿಗಳು ದೂರ ಪ್ರಯಾಣಿಸುವುದನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಂಡಿದ್ದು,  ಪರೀಕ್ಷಾ ಹಾಲ್‌ನಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
 
ಕೋವಿಡ್-19 ನಿಂದಾಗಿ ಮಾರ್ಚ್ 25ರಿಂದ ದೇಶದಾದ್ಯಂತ ಲಾಕ್‍ಡೌನ್ ಘೋಷಿಸಿದ್ದ ಕಾರಣ ಪರೀಕ್ಷೆ ಮುಂದೂಡಲಾಗಿತ್ತು. ಹೀಗೆ ಮುಂದೂಡಿದ ಪರೀಕ್ಷೆಗಳನ್ನು ಜುಲೈ1 ರಿಂದ 15ರ ವರೆಗೆ ನಡೆಸಲಾಗುವುದು.

ಇದನ್ನೂ ಓದಿಜುಲೈ 1ರಿಂದ ಸಿಬಿಎಸ್‌ಇ ಬಾಕಿ ಪರೀಕ್ಷೆ

ಹೊರಗಿನ ಪರೀಕ್ಷಾ ಕೇಂದ್ರಗಳ ಬದಲು ಆಯಾ ಶಾಲೆಯಲ್ಲಿಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾನವಸಂಪನ್ಮೂಲ ಸಚಿವಾಲಯ  ಹೇಳಿತ್ತು. ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಕೋವಿಡ್-19 ಕಂಟೇನ್ಮೆಂಟ್ ವಲಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಿರುವುದಿಲ್ಲ. ವಿದ್ಯಾರ್ಥಿಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ  ಹೊಣೆ ರಾಜ್ಯ ಸರ್ಕಾರದ್ದಾಗಿರುತ್ತದೆ.

ಸಾಮಾನ್ಯವಾಗಿ ಈ ಪರೀಕ್ಷೆಗಳು ಹೊರಗಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಅಲ್ಲಿ ಹೊರಗಿನ ಶಿಕ್ಷಕರೇ ಪರೀಕ್ಷೆ ಪ್ರಕ್ರಿಯೆಗಳ ಮೇಲ್ವಿಚಾರಣೆ ನಡೆಸುತ್ತಾರೆ.

12ನೇ ತರಗತಿಯ ಪರೀಕ್ಷೆ ದೇಶದಾದ್ಯಂತ ನಡೆಯಲಿದೆ. 10ನೇ ತರಗತಿ ಪರೀಕ್ಷೆ ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಉಳಿದಿತ್ತು. ಸಿಎಎ ವಿರುದ್ಧ ಪ್ರತಿಭಟನೆಗಳಿಂದಾಗಿ ಆ ಪ್ರದೇಶದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. ಬಾಕಿ ಉಳಿದಿರುವ 29 ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವುದಾಗಿ ಕಳೆದ ತಿಂಗಳು ಸಿಬಿಎಸ್‌ಇ ಹೇಳಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು