ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವರು ಜಿಲ್ಲೆಯಲ್ಲೇ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗೆ ಅನುಮತಿ: ರಮೇಶ್ ಪೋಖ್ರಿಯಾಲ್ 

Last Updated 27 ಮೇ 2020, 16:13 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್ ಲಾಕ್‌ಡೌನ್ ವೇಳೆಯಲ್ಲಿ ಶಾಲೆಗಳನ್ನು ಮುಚ್ಚಿದ್ದರಿಂದಾಗಿ ವಿವಿಧ ರಾಜ್ಯಗಳಿಗೆ ಅಥವಾ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರಳಿದ್ದ ಸಿಬಿಎಸ್‌ಇ 10 ಮತ್ತು 12 ವಿದ್ಯಾರ್ಥಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿಯು ನಿರ್ಧರಿಸಿದೆ.

ಶಿಕ್ಷಣ ಸಚಿವರ ಪ್ರಕಾರ, ಲಾಕ್‌ಡೌನ್ ಕಾರಣದಿಂದಾಗಿ ತಮ್ಮ ಶಾಲೆಗಳಿಗೆ ಪ್ರಯಾಣಿಸಲು ಹೊರವಲಯದ ವಿದ್ಯಾರ್ಥಿಗಳು ಎದುರಿಸಬಹುದಾದ ಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಎಸ್‌ಇ ಜುಲೈ 1 ರಿಂದ ಉಳಿದ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.

ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಆಯಾ ಶಾಲೆಗಳಿಗೆ ವಿದ್ಯಾರ್ಥಿಗಳು ತಿಳಿಸಬಹುದು.

ಲಾ‌ಕ್‌ಡೌನ್‌ನಿಂದಾಗಿ ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ತೆರಳಿದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಸದ್ಯ ತಾವಿರುವ ತವರು ಜಿಲ್ಲೆಗಳಲ್ಲಿಯೇ ಪರೀಕ್ಷೆಗಳಿಗೆ ಹಾಜರಾಗಬಹುದು. ಅವರು ಪ್ರಯಾಣಿಸುವ ಅಗತ್ಯವಿಲ್ಲ. ಈ ಕುರಿತ ಮಾಹಿತಿ ಮತ್ತು ಅಂತವರ ಮನವಿಗಳನ್ನು ನೋಂದಾಯಿಸುವ ವಿಧಾನಗಳ ಕುರಿತು ಸಿಬಿಎಸ್ಇ ಅಧಿಸೂಚನೆಯನ್ನು ಹೊರಡಿಸುತ್ತದೆ. ತಮ್ಮ ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಯ ವಿವರಗಳನ್ನು ವಿದ್ಯಾರ್ಥಿಗಳು ಜೂನ್ ಮೊದಲ ವಾರದಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಪರೀಕ್ಷೆಯನ್ನು ಮುಂದೂಡಲಾಯಿತು. ಈಗ ಜುಲೈ 1 ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿವೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಉಳಿದಿವೆ.

ಪ್ರೀಮಿಯಂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವ ಮೊದಲು ಆಗಸ್ಟ್‌ನಲ್ಲಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT