ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾ: ಗುಂಡಿಕ್ಕಿ ಲೇಖಕನ ಹತ್ಯೆ

Last Updated 12 ಜೂನ್ 2018, 19:30 IST
ಅಕ್ಷರ ಗಾತ್ರ

ಢಾಕಾ: ಜಾತ್ಯತೀತ ತತ್ವ ಪ್ರತಿಪಾದಿಸುತ್ತಿದ್ದ ಲೇಖಕರೊಬ್ಬರನ್ನು ಅಪರಿಚಿತ ದಾಳಿಕೋರರು ಸೋಮವಾರ ಸಂಜೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಬಿಶಾಕಾ ಪ್ರಕಾಶನದ ಪ್ರಕಾಶಕ ಹಾಗೂ ಲೇಖಕ ಷಹಜಹಾನ್‌ ಬಚ್ಚು (60) ದುಷ್ಕರ್ಮಿಗಳ ಗುಂಡಿಗೆ ಬಲಿಯಾದವರು. ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು, ಬಾಂಗ್ಲಾದೇಶ ಕಮ್ಯುನಿಸ್ಟ್‌ ಪಾರ್ಟಿಯ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

ಇಫ್ತಾರ್‌ಗೂ ಮುನ್ನ, ಬಚ್ಚು ಅವರು ತಮ್ಮ ಸ್ನೇಹಿತನನ್ನು ಭೇಟಿಯಾಗಲು ಅವರ ಔಷಧ ಅಂಗಡಿಗೆ ತೆರಳಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ಐವರು ದುಷ್ಕರ್ಮಿಗಳು ಅವರನ್ನು ಹೊರಗೆಳೆದು ಗುಂಡು ಹಾರಿಸಿದ್ದಾರೆ. ಮುನ್ಷಿಗಂಜ್‌ ಜಿಲ್ಲೆಯ ಕಾಕಲ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ದಾಳಿ ಮಾಡುವುದಕ್ಕೂ ಮುನ್ನ, ಉಗ್ರಗಾಮಿಗಳು ಔಷಧ ಅಂಗಡಿ ಎದುರು ಕಚ್ಚಾ ಬಾಂಬ್‌ ಸ್ಫೋಟಿಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT