ಮಧ್ಯಾಹ್ನದ ಬಿಸಿಯೂಟಕ್ಕೆ ಕೇಂದ್ರದ ನಿರ್ದೇಶನ

7

ಮಧ್ಯಾಹ್ನದ ಬಿಸಿಯೂಟಕ್ಕೆ ಕೇಂದ್ರದ ನಿರ್ದೇಶನ

Published:
Updated:
Deccan Herald

ನವದೆಹಲಿ: ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಸ್ಥಳೀಯರು, ಸ್ವಯಂಸೇವಾ ಸಂಸ್ಥೆಗಳು ಶಾಲಾ ಮಕ್ಕಳಿಗೆ ನೀಡುವ ಆಹಾರ ಪದಾರ್ಥ ಮತ್ತು ತಿನಿಸುಗಳ ಬಗ್ಗೆ ಪ್ರತ್ಯೇಕ ದಾಖಲಾತಿಯನ್ನು ನಿರ್ವಹಿಸಿ ಎಂದು ಕರ್ನಾಟಕವೂ ಸೇರಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ನಡೆಸುತ್ತಿರುವ 11 ರಾಜ್ಯಗಳಿಗೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ.

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿರುವುದು ಇದೇ ಮೊದಲು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ನಿರ್ದೇಶನವನ್ನು ನೀಡಿದೆ. ಎಲ್ಲಾ ರಾಜ್ಯಗಳೂ ಇಂತಹ ಯೋಜನೆ ಜಾರಿಗೆ ತರಬೇಕು ಎಂದು ಸಚಿವಾಲಯವು ಅಭಿಪ್ರಾಯಪಟ್ಟಿದೆ.

ನಿರ್ದೇಶನಗಳು
* ಆಗತಾನೇ ಸಿದ್ಧಪಡಿಸಿದ ಆಹಾರ ಪದಾರ್ಥಗಳನ್ನಷ್ಟೇ ವಿದ್ಯಾರ್ಥಿಗಳಿಗೆ ನೀಡಬೇಕು

* ಪ್ಯಾಕ್‌ ಮಾಡಲಾದ ಪದಾರ್ಥ/ತಿನಿಸುಗಳಾಗಿದ್ದರೆ ಅವುಗಳ ಎಕ್ಸ್‌ಪೈರಿ ದಿನಾಂಕವನ್ನು ಕಡ್ಡಾಯವಾಗಿ ಪರಿಶೀಲಿಸಬೇಕು

* ಹಣ್ಣುಗಳನ್ನು ನೀಡುವುದಾದರೆ ಅವುಗಳು ತಾಜಾ ಆಗಿರಬೇಕು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !