ನವದೆಹಲಿ: ಕೃಷಿ ಭೂಮಿ ಗುತ್ತಿಗೆ, ಜಾನುವಾರು ಮಾರುಕಟ್ಟೆ, ಕೃಷಿ ಉತ್ಪನ್ನಗಳು ಮತ್ತು ಒಪ್ಪಂದ ಕೃಷಿ ವಿಷಯದಲ್ಲಿ ಕೇಂದ್ರ ಸರ್ಕಾರದ ಮೂರು ಪ್ರಮುಖ ಮಾದರಿ ಕಾನೂನುಗಳನ್ನು ರಾಜ್ಯ ಸರ್ಕಾರಗಳು ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

16 ಅಂಶಗಳ ಕಾರ್ಯಕ್ರಮದ ಅಡಿಯಲ್ಲೇ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಕೃಷಿ ಮಾರುಕಟ್ಟೆಯನ್ನು ಉದಾರೀಕರಣಗೊಳಿಸಲು ಆದ್ಯತೆ ನೀಡುವುದಾಗಿ ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ಮಾದರಿ ಕೃಷಿ ಭೂಮಿ ಗುತ್ತಿಗೆ ಕಾಯ್ದೆ–2016, ಮಾದರಿ ಕೃಷಿ ಉತ್ಪನ್ನ ಮತ್ತು ಜಾನುವಾರು ಮಾರುಕಟ್ಟೆ ಕಾಯ್ದೆ–2017
ಹಾಗೂ ಮಾದರಿ ಕೃಷಿ ಉತ್ಪನ್ನ ಮತ್ತು ಜಾನುವಾರು ಗುತ್ತಿಗೆ ಕೃಷಿ ಮತ್ತು ಸೇವೆಗಳು ಕಾಯ್ದೆ–2018 ಅನ್ನು ರಾಜ್ಯ ಸರ್ಕಾರಗಳು
ಅನುಷ್ಠಾನಗೊಳಿಸಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದರು.

ಜಲ ಸಂಕಷ್ಟ ಎದುರಿಸುತ್ತಿರುವ 100 ಜಿಲ್ಲೆಗಳಲ್ಲಿ ಸಮಗ್ರವಾದ ಯೋಜನೆಗಳನ್ನು ರೂಪಿಸಲು ಉದ್ದೇಶಿಸಲಾಗಿದೆ. ಮಳೆ ಆಧಾರಿತ ಜಿಲ್ಲೆಗಳಲ್ಲಿ ಸಮಗ್ರ ಕೃಷಿ ವ್ಯವಸ್ಥೆಯನ್ನು ಅಳವಡಿಸಲಾಗುವುದು. ಸೌರ ವಿದ್ಯುತ್ ಉತ್ಪಾದನೆ, ಜೇನು ಸಾಕಾಣಿಕೆ ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು. 2019ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖಿ
ಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತರಿ ಯೋಜನೆ (ಎಂಎನ್ಆರ್‌ಇಜಿಎಸ್) ಅಡಿಯಲ್ಲಿ ಮೇವು ಫಾರ್ಮ್
ಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಮೀನುಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗುವುದು. 2022-23ರ ವೇಳೆಗೆ 200 ಲಕ್ಷ ಟನ್‌ಗಳ ಮೀನು ಉತ್ಪಾದನೆಯನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಜತೆಗೆ ಮೀನುಗಾರಿಕೆ ಚಟುವಟಿಕೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲು ಉತ್ತೇಜನ ನೀಡಲಾಗುವುದು. ಈ ಮೂಲಕ 2024–25ರ ವೇಳೆಗೆ ₹ 1ಲಕ್ಷಕೋಟಿ ಮೌಲ್ಯದ ಮೀನುಗಾರಿಕೆ ರಫ್ತು ಮಾಡಲು
ಉದ್ದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.