ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಅನುದಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳ

ಕೇಂದ್ರ ಬಜೆಟ್ 2019
Last Updated 1 ಫೆಬ್ರುವರಿ 2019, 12:24 IST
ಅಕ್ಷರ ಗಾತ್ರ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ಎಸ್‌ಸಿ, ಎಸ್‌ಟಿ) ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನವನ್ನು ಮಧ್ಯಂತರ ಬಜೆಟ್‌ನಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ ಕಲ್ಯಾಣಕ್ಕಾಗಿ ₹76,801 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಶೇ 35.6 ರಷ್ಟು ಹೆಚ್ಚಾಗಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಕ್ಕೆ ₹50,086 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಶೇ 28 ರಷ್ಟು ಹೆಚ್ಚು.

ನರೇಗಾಗೆ ₹60,000 ಕೋಟಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ ₹60,000 ಕೋಟಿ ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಈ ಅನುದಾನವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಹಾರ: ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಆಹಾರಧಾನ್ಯ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. 2018–2019ರಲ್ಲಿ ₹1,70,000 ಕೋಟಿ ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರಧಾನ್ಯ ದೊರಕಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಗ್ರಾಮೀಣ ರಸ್ತೆಗಳಸುಧಾರಣೆಗೆ ಕ್ರಮ

ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಮಧ್ಯಂತರ ಬಜೆಟ್‌ನಲ್ಲಿ ₹19,000 ಕೋಟಿ ಮೀಸಲಿಡಲಾಗಿದೆ. 17.84 ಲಕ್ಷ ವಾಸಸ್ಥಳದ ಪೈಕಿ 15.80 ಲಕ್ಷ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಉಳಿದ ರಸ್ತೆಗಳ ಕಾಮಗಾರಿ ಮುಗಿಯುವ ಹಂತದಲ್ಲಿದೆ ಎಂದು ಬಜೆಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಬಜೆಟ್ ಸಂಬಂಧಿತ ಇನ್ನಷ್ಟು ಸುದ್ದಿಗಳು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT