ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ನೌಕರರಿಗೆ ‘ಎಲ್‌ಟಿಸಿ’ ಸೌಲಭ್ಯ

Last Updated 29 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ರೈಲ್ವೆ ನೌಕರರಿಗೆ ಇದೇ ಮೊದಲ ಬಾರಿಗೆ ರಜೆ ಪ್ರಯಾಣ ರಿಯಾಯಿತಿ (ಎಲ್‌ಟಿಸಿ) ಸೌಲಭ್ಯ ನೀಡಲಾಗಿದೆ. ಈ ಸಂಬಂಧ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಆದೇಶ ಹೊರಡಿಸಿದೆ.

ಭಾರತೀಯ ರೈಲ್ವೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಉಚಿತ ಪಾಸ್‌ ಸೌಲಭ್ಯ ಇರುವುದರಿಂದ ನೌಕರರು, ಮತ್ತು ಕುಟುಂಬ ಸದಸ್ಯರಿಗೆ ಇದುವರೆಗೆ ಎಲ್‌ಟಿಸಿ ಸೌಲಭ್ಯ ನೀಡುತ್ತಿರಲಿಲ್ಲ. ಆದರೆ, ಏಳನೇ ವೇತನ ಆಯೋಗವು ಎಲ್‌ಟಿಸಿ ಸೌಲಭ್ಯ ನೀಡಬೇಕು ಎಂದು ಶಿಫಾರಸು ಮಾಡಿತ್ತು. ಈಗ ಅದನ್ನು ಒಪ್ಪಿಕೊಂಡಿರುವ ರೈಲ್ವೆ ಇಲಾಖೆಯು ನಾಲ್ಕು ವರ್ಷಗಳಿಗೊಮ್ಮೆ ತನ್ನ ನೌಕರರಿಗೆ ಎಲ್‌ಟಿಸಿ ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT